ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕೋಪಯೋಗಿ ಇಲಾಖೆ ಬಿಲ್ ಪಾವತಿಗೆ ಕೆಂಪಣ್ಣ ಆಗ್ರಹ

Published 13 ಫೆಬ್ರುವರಿ 2024, 16:12 IST
Last Updated 13 ಫೆಬ್ರುವರಿ 2024, 16:12 IST
ಅಕ್ಷರ ಗಾತ್ರ

ಬೆಂಗಳೂರು: ಲೋಕೋಪಯೋಗಿ ಇಲಾಖೆಯಲ್ಲಿನ 1,054 ಸಣ್ಣ ಗುತ್ತಿಗೆದಾರರಿಗೆ ₹800 ಕೋಟಿ ಬಿಲ್‌ ಪಾವತಿಸಿದಂತೆ ಇತರೆ ಇಲಾಖೆಗಳಲ್ಲಿನ ಬಾಕಿ ಇರುವ ಬಿಲ್‌ಗಳನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆಗ್ರಹಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲಾ ಮುಖ್ಯರಸ್ತೆಗಳು ಹಾಗೂ ರಾಜ್ಯ ಹೆದ್ದಾರಿಗಳ ನಿರ್ವಹಣೆ ಮತ್ತು ಸುಧಾರಣೆ ಕಾಮಗಾರಿ ಕೈಗೊಂಡಿದ್ದ 1,945 ಗುತ್ತಿಗೆದಾರರಿಗೆ ಮೂರು ವರ್ಷಗಳಿಂದ ಬಿಲ್‌ಗಳ ಪಾವತಿ ಬಾಕಿ ಇತ್ತು. ಲೋಕೋಪಯೋಗಿ ಇಲಾಖೆಯಲ್ಲಿ ಅಪೆಂಡಿಕ್ಸ್‌–ಇ ಅಡಿಯಲ್ಲಿ ಕಾಮಗಾರಿಗಳ ಕೈಗೊಂಡಿದ್ದ ಸಣ್ಣ ಗುತ್ತಿಗೆದಾರರಿಗೆ ಏಕ ಕಾಲಕ್ಕೆ ₹800 ಕೋಟಿಯನ್ನು ಯಾವುದೇ ಲಂಚ ಪಡೆಯದೇ ಬಿಡುಗಡೆಗೊಳಿಸಲಾಗಿದೆ’ ಎಂದು ಹೇಳಿದರು.

‘ಬಿಬಿಎಂಪಿ, ಜಲ ಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌, ವಸತಿ, ಸಣ್ಣ ನೀರಾವರಿ ಇಲಾಖೆಗಳಲ್ಲಿ ಬಾಕಿ ಇರುವ ಬಿಲ್‌ಗಳನ್ನು ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ನೀಡಿದ್ದಾರೆ’ ಎಂದು ಡಿ. ಕೆಂಪಣ್ಣ ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT