ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕರ್ನಾಟಕ ರಾಜ್ಯ ಮುಕ್ತ ವಿ.ವಿ: ಪ್ರವೇಶಾತಿ ಪ್ರಾರಂಭ

Published : 27 ಸೆಪ್ಟೆಂಬರ್ 2024, 16:14 IST
Last Updated : 27 ಸೆಪ್ಟೆಂಬರ್ 2024, 16:14 IST
ಫಾಲೋ ಮಾಡಿ
Comments

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 2024–25ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರವೇಶಾತಿ ಪ್ರಾರಂಭವಾಗಿದೆ. 

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವವಿದ್ಯಾಲಯದ ಕುಲಪತಿ ಶರಣಪ್ಪ ವಿ. ಹಲಸೆ, ‘ವಿಶ್ವವಿದ್ಯಾಲಯ ಧನ ಸಹಾಯ ಆಯೋಗ (ಯುಜಿಸಿ) ಅನುಮೋದಿತ ಬಿ.ಎ, ಬಿ.ಕಾಂ., ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ, ಎಂ.ಎ, ಎಂ.ಕಾಂ, ಎಂ.ಸಿ.ಎ., ಎಂ.ಎಸ್ಸಿ, ಡಿಪ್ಲೊಮಾ ಸೇರಿ ವಿವಿಧ 64 ಕೋರ್ಸ್‌ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಬೆಂಗಳೂರಿನಲ್ಲಿರುವ ಆರು ಪ್ರಾದೇಶಿಕ ಕೇಂದ್ರಗಳಲ್ಲಿ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ’ ಎಂದು ತಿಳಿಸಿದರು. 

‘ವಿಶ್ವವಿದ್ಯಾಲಯದ ವೆಬ್‌ಸೈಟ್‌ ಮೂಲಕ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಭರ್ತಿ ಮಾಡಿ, ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಬೇಕು. ದಾಖಲಾತಿಗಳ ಪರಿಶೀಲನೆ ಬಳಿಕ ಆನ್‌ಲೈನ್ ಮೂಲಕ ಪ್ರವೇಶ ಶುಲ್ಕವನ್ನು ಪಾವತಿಸಿ, ಸಿದ್ದಪಾಠಗಳನ್ನು ಪಡೆಯಬಹುದು’ ಎಂದರು. 

‘ಬಿ.ಎ ಸಾಮಾನ್ಯ, ಬಿ.ಕಾಂ, ಎಂ.ಎ, ಎಂ.ಕಾಂ, ಎಂ.ಬಿ.ಎ, ಎಂ.ಎಸ್ಸಿ ಸೇರಿ 10 ಆನ್‌ಲೈನ್‌ ಕೋರ್ಸ್‌ಗಳನ್ನೂ ನಡೆಸಲಾಗುತ್ತಿದೆ’ ಎಂದು ತಿಳಿಸಿದರು. 

ವಿವರಕ್ಕೆ: www.ksoumysuru.ac.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT