ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಧೀಂದ್ರರಾವ್ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ

Last Updated 30 ಡಿಸೆಂಬರ್ 2019, 22:52 IST
ಅಕ್ಷರ ಗಾತ್ರ

ಬೆಂಗಳೂರು:ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಅಧ್ಯಕ್ಷರಾಗಿಡಾ.ಎಂ.ಸುಧೀಂದ್ರರಾವ್ ಅವರನ್ನು ಸರ್ಕಾರ ನೇಮಕ ಮಾಡಿದೆ.

ಅಧ್ಯಕ್ಷ ಸ್ಥಾನಕ್ಕೆ ಕಳೆದ ಸೆ.21ಕ್ಕೆ ಶಾಸಕ‌ಡಾ.ಕೆ.ಸುಧಾಕರ್‌ ರಾಜೀನಾಮೆ ನೀಡಿದ್ದರು. ಇದರಿಂದಾಗಿ ನಾಲ್ಕು ತಿಂಗಳ ಕಾಲ ಪೂರ್ಣಾವಧಿ ಅಧ್ಯಕ್ಷರಿರಲಿಲ್ಲ.ಡಾ.ಸುಧೀಂದ್ರರಾವ್ ನೇಮಕದ ವೇಳೆ ಸುಪ್ರೀಂ ಕೋರ್ಟ್‌ ಆದೇಶವನ್ನು ಪಾಲಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.

ಮಂಡಳಿಯ ಅಧ್ಯಕ್ಷರಾಗುವವರು ಪರಿಸರ ವಿಜ್ಞಾನ ಪದವಿ ಪಡೆದಿರಬೇಕು. ಅಲ್ಲದೇ, ಪರಿಸರ ಸಂಬಂಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರಬೇಕು. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು. ಆದರೆ, ಇದನ್ನು ಗಾಳಿಗೆ ತೂರಿ, ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದಿರುವ ರಾವ್ ಅವರನ್ನು ನೇಮಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT