ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಬಿ.ಎ. ಪಾಟೀಲ, ‘ಹಿರಿಯ ನಾಗರಿಕರನ್ನು ಕಾನೂನು ಬದ್ಧವಾಗಿ ರಾಷ್ಟ್ರದ ಸಂಪತ್ತು ಎಂದು ಘೋಷಿಸಬೇಕು. ಎಲ್ಲ ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು ₹10 ಸಾವಿರ ಸಹಾಯ ಧನ, ಉಚಿತ ವೈದ್ಯಕೀಯ ಚಿಕಿತ್ಸೆ, ಜೀವವಿಮಾ ಸೌಲಭ್ಯ ನೀಡಬೇಕು. ಕೇಂದ್ರ ಮತ್ತು ರಾಜ್ಯದಲ್ಲಿ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸಬೇಕು’ ಎಂದು ಆಗ್ರಹಿಸಿದರು.