ಬೆಂಗಳೂರು: ಯಲಹಂಕದ ಕೆಪಿಸಿಎಲ್ ಯೋಜನಾ ಪ್ರದೇಶದಲ್ಲಿ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಸ್ಥಾಪಿಸಿರುವ ರಾಜ್ಯದ ಮೊಟ್ಟ ಮೊದಲ 370 ಮೆಗಾವಾಟ್ ಸಾಮರ್ಥ್ಯದ ಅನಿಲ ಆಧಾರಿತ ಯಲಹಂಕ ಸಂಯುಕ್ತ ವಿದ್ಯುತ್ ಸ್ಥಾವರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್ ಮಂಗಳವಾರ ಲೋಕಾರ್ಪಣೆ ಮಾಡಿದರು.

ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಈ ಸ್ಥಾವರ ಉದ್ಘಾಟನೆ ಮೂಲಕ ಭವಿಷ್ಯದ ಬೇಡಿಕೆಗೆ ಅಗತ್ಯ ವಿದ್ಯುತ್ ಉತ್ಪಾದನೆಯತ್ತ ಮಹತ್ವದ ಹೆಜ್ಜೆ ಇಟ್ಟಿದ್ದೇವೆ’ ಎಂದರು.

‘ವಿದ್ಯುತ್ ಕ್ಷೇತ್ರದಲ್ಲಿ ಸ್ವಾವಲಂಬನೆ ಸಾಧ್ಯವಾಗದಿದ್ದರೆ ಆರ್ಥಿಕ ಪ್ರಗತಿ ಸಾಧ್ಯವಿಲ್ಲ. ವಿದ್ಯುತ್ ಉತ್ಪಾದನೆಯಲ್ಲಿ ಸ್ವಾಲಂಬನೆ ಸಾಧಿಸದಿದ್ದಲ್ಲಿ ಜಿಡಿಪಿ ಬೆಳವಣಿಗೆಯೂ ಆಗುವುದಿಲ್ಲ. ಈ ನಿಟ್ಟಿನಲ್ಲಿ ಸರ್ಕಾರ ಗುಣಮಟ್ಟದ ವಿದ್ಯುತ್ ಪೂರೈಕೆ ಜತೆಗೆ ವಿದ್ಯುತ್ ಉತ್ಪಾದನೆ ಹೆಚ್ಚಿಸಲು ಆದ್ಯತೆ ನೀಡುತ್ತದೆ’ ಎಂದು ಹೇಳಿದರು.

‘ಕಳೆದ ವರ್ಷ ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ಸಮರ್ಪಕ ವಿದ್ಯುತ್ ಪೂರೈಸುವಲ್ಲಿ ಯಶಸ್ವಿಯಾಗಿದ್ದೇವೆ. ಆದರೂ ಭವಿಷ್ಯದ ಬೇಡಿಕೆಯನ್ನು ಮುಂದಿಟ್ಟುಕೊಂಡು 2030ರ ವೇಳೆಗೆ ಈಗಿರುವ 34,639 ಸಾವಿರ ಮೆಗಾವಾಟ್ ವಿದ್ಯುತ್ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯವನ್ನು 60 ಸಾವಿರ ಮೆಗಾವಾಟ್ಗೆ ಹೆಚ್ಚಿಸಲು ಬಜೆಟ್ನಲ್ಲಿ ಘೋಷಿಸಿದ್ದು, ಅದಕ್ಕೆ ತಕ್ಕಂತೆ ಯೋಜನೆ ರೂಪಿಸಲಾಗುತ್ತದೆ ಎಂದು ತಿಳಿಸಿದರು.

ಛತ್ತೀಸಗಡದ ಗೋದ್ನಾದಲ್ಲಿ 1600 ಮೆಗಾವಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಸ್ಥಾವರ, ಶರಾವತಿಯಲ್ಲಿ 2,000 ಮೆಗಾವಾಟ್, ವಾರಾಹಿಯಲ್ಲಿ 1500 ಮೆಗಾವಾಟ್ ಪಂಪ್ಡ್ ಸ್ಟೋರೇಜ್ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದರ ಜತೆಗೆ ಸೌರ ಮತ್ತು ಪವನ ವಿದ್ಯುತ್ ಉತ್ಪಾದನೆಗೂ ಆದ್ಯತೆ ನೀಡಲಾಗುವುದು ಎಂದರು.

ಕುಸುಮ್ಗೆ ನನ್ನ ಯೋಜನೆಯೇ ಪ್ರೇರಣೆ:

‘ಹಿಂದೆ ಇದೇ ಸ್ಥಳದಲ್ಲಿದ್ದ ಡೀಸೆಲ್ ವಿದ್ಯುತ್ ಘಟಕ ಸ್ಥಗಿತಗೊಳಿಸಿ, ಅತ್ಯಾಧುನಿಕ ತಂತ್ರಜ್ಞಾನದ ಅನಿಲ ಸ್ಥಾವರ ಸ್ಥಾಪಿಸಲಾಗಿದೆ. ಪಾವಗಡ ಸೋಲಾರ್ ಪಾರ್ಕ್ ಮಾಡಿದ್ದು ಇತಿಹಾಸ. ಕೃಷಿ ಪಂಪ್ಸೆಟ್ಗಳಿಗೆ ಸೋಲಾರ್ ವಿದ್ಯುತ್ ಪೂರೈಸುವ ಯೋಜನೆಗೆ ಅಡಿಪಾಯ ಹಾಕಿದ್ದೇ ನಾವು. ಅದನ್ನು ಈಗ ಕೇಂದ್ರ ಸರ್ಕಾರ ಕುಸುಮ್ ಎಂಬ ಹೆಸರಿಟ್ಟು ಜಾರಿಗೊಳಿಸಿದೆ. ಮೇಕೆದಾಟು ಯೋಜನೆ ಪೂರ್ಣಗೊಂಡರೆ ಅದರಿಂದ 400 ಮೆಗಾವಾಟ್ ಉತ್ಪಾದನೆ ಸಾಧ್ಯ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಇಂಧನ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ, ‘ರಾಜ್ಯದ ಪ್ರಥಮ ಅನಿಲ ವಿದ್ಯುತ್ ಸ್ಥಾವರದ ಉದ್ಘಾಟನೆ ದಿನವನ್ನು ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕು. ಸರ್ಕಾರದ ಇಚ್ಛಾಶಕ್ತಿಯಿಂದಷ್ಟೇ ಮುಚ್ಚಿದ ಘಟಕವನ್ನು ಪುನರ್ ಸ್ಥಾಪಿಸಲು ಸಾಧ್ಯವಾಗಿದೆ’ ಎಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ನಗರಾಭಿವೃದ್ಧಿ ಸಚಿವ ಬಿ.ಎಸ್.ಸುರೇಶ್, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್, ನಸೀರ್ ಅಹ್ಮದ್, ಶಾಸಕ ಎಸ್.ಆರ್.ವಿಶ್ವನಾಥ್, ಶಾಸಕ ಅಜಯ್ ಸಿಂಗ್, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್, ಬಿಎಚ್ಇಎಲ್ ಅಧ್ಯಕ್ಷ ಕೊಪ್ಪು ಸದಾಶಿವಮೂರ್ತಿ, ಗೇಲ್ ಅಧ್ಯಕ್ಷ ಸಂದೀಪ್ ಕುಮಾರ್ ಗುಪ್ತ, ಕೆಇಆರ್ಸಿ ಸದಸ್ಯರಾದ ಜಾವೇದ್ ಅಖ್ತರ್, ಜಗದೀಶ್, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಪಾಲ್ಗೊಂಡಿದ್ದರು.

ವೈಸಿಸಿಪಿಪಿ ಉದ್ಯೋಗಿಗಳಿಗೆ ₹5 ಸಾವಿರ ಬೋನಸ್

ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರದ ಎಲ್ಲಾ ಉದ್ಯೋಗಿಗಳಿಗೆ ₹5 ಸಾವಿರ ಬೋನಸ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಹಿಂದೆ ಬಳ್ಳಾರಿ ಉಷ್ಣ ವಿದ್ಯುತ್ ಸ್ಥಾವರ ಲೋಕಾರ್ಪಣೆ ಸಂದರ್ಭದಲ್ಲಿ ಅಲ್ಲಿನ ಉದ್ಯೋಗಿಗಳಿಗೆ ಬೋನಸ್ ನೀಡಲಾಗಿತ್ತು. ಅದೇ ಮಾದರಿಯಲ್ಲಿ ಈ ಸ್ಥಾವರದ ಉದ್ಯೋಗಿಗಳಿಗೂ ಬೋನಸ್ ನೀಡುವುದಾಗಿ ಕೆಪಿಸಿಎಲ್ ಅಧ್ಯಕ್ಷನಾಗಿ ಘೋಷಿಸುತ್ತಿದ್ದೇನೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.