ಸೋಮವಾರ, ಮಾರ್ಚ್ 20, 2023
30 °C

ಬೆಂಗಳೂರು: ಪೂರ್ಣ ಪ್ರಮಾಣದಲ್ಲಿ ಸಾರಿಗೆ ಸೇವೆ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಇಂದಿನಿಂದ (ಸೋಮವಾರ) ಪೂರ್ಣ ಪ್ರಮಾಣದಲ್ಲಿ ಸಾರ್ವಜನಿಕ ಸಾರಿಗೆ ಸೇವೆ ಆರಂಭವಾಗಿದೆ‌. 

ಬಸ್ ಹಾಗೂ ಮೆಟ್ರೊ ರೈಲಿನಲ್ಲಿ ಎಲ್ಲ ಆಸನಗಳ ಭರ್ತಿಗೆ ಅವಕಾಶವಿದ್ದು, ಎಲ್ಲ ದಿನಗಳಲ್ಲಿಯೂ ಕಾರ್ಯಾಚರಣೆ ನಡೆಸಲಿವೆ. 

ಮೆಟ್ರೊ ರೈಲು ಬೆಳಿಗ್ಗೆ 7ರಿಂದ ರಾತ್ರಿ 8ರವರೆಗೆ, ಬಿಎಂಟಿಸಿ ಬಸ್ ಗಳು ಬೆಳಿಗ್ಗೆ 5ರಿಂದ ರಾತ್ರಿ 9ರವರೆಗೆ ಸೇವೆಗೆ ಲಭ್ಯವಾಗಲಿವೆ. 

ಮೆಟ್ರೊ ರೈಲುಗಳಲ್ಲಿ ಬೆಳಿಗ್ಗೆ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು. ಮೆಜೆಸ್ಟಿಕ್ ನಿಲ್ದಾಣ ಹೊರತು ಪಡಿಸಿ ಉಳಿದ ನಿಲ್ದಾಣಗಳಲ್ಲಿ ಬೆರಳೆಣಿಕೆಯಷ್ಟು ಪ್ರಯಾಣಿಕರಿದ್ದರು. ಈಗ ಬಿಎಂಟಿಸಿ ಬಸ್ ಮತ್ತು ರೈಲುಗಳಲ್ಲಿ ಪ್ರಯಾಣಿಕರ ಸಂಖ್ಯೆ ಕ್ರಮೇಣ ಹೆಚ್ಚಾಗುತ್ತಿವೆ. ಬಿಎಂಟಿಸಿಯ ಸುಮಾರು ಐದು ಸಾವಿರ ಬಸ್ ಗಳು ರಸ್ತೆಗಿಳಿದಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು