ಬೆಂಗಳೂರು: ‘ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷರಾಗಿದ್ದ ಮಹೇಶ ಜೋಶಿ ಅವರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ವಿಚಾರಣಾಧಿಕಾರಿ ನೇಮಿಸಿರುವ ಸರ್ಕಾರ, ತನಿಖೆಯನ್ನು ಶೀಘ್ರ ಪೂರ್ಣಗೊಳಿಸಿ ಕಸಾಪ ಚಟುವಟಿಕೆಗಳು ರಾಜ್ಯದಾದ್ಯಂತ ನಡೆಯಲು ಕ್ರಮ ವಹಿಸಬೇಕು’ ಎಂದು ಕರ್ನಾಟಕ ವಿಕಾಸ ರಂಗ ಆಗ್ರಹಿಸಿದೆ.

‘ಆಡಳಿತಾಧಿಕಾರಿ ಅವರ ನೇತೃತ್ವದಲ್ಲಿ ಆದರೂ ರಾಜ್ಯದಾದ್ಯಂತ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕಸಾಪ ಚಟುವಟಿಕೆಗಳನ್ನು ನಡೆಸುವುದು ಅಗತ್ಯವಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಸಮ್ಮೇಳನಗಳು ನಡೆಯುತ್ತಿಲ್ಲ. ಪರಿಷತ್ತಿನ ಮೇಲೆ ವಿಶ್ವಾಸವಿಟ್ಟು ಸ್ಥಾಪಿತವಾಗಿದ್ದ ದತ್ತಿ ಪ್ರಶಸ್ತಿಗಳು ಪ್ರದಾನವಾಗುತ್ತಿಲ್ಲ’ ಎಂದು ಕಸಾಪ ಮಾಜಿ ಗೌರವ ಕಾರ್ಯದರ್ಶಿಯೂ ಆಗಿರುವ ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ. ಚನ್ನೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.

‘ಬಳ್ಳಾರಿಯಲಿ ನಡೆಯಬೇಕಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಸ್ಥಗಿತಗೊಂಡಿದೆ. ಒಟ್ಟಾರೆ ಕನ್ನಡ ಸಾಹಿತ್ಯ ಪರಿಷತ್ತು ಹೆಸರಿಗೆ ಮಾತ್ರ ಎಂಬಂತಿದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕು’ ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.ಸ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.