ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರ ಭಾರಿ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 28 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಭಾರಿ ಗಾಳಿ ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ತಿಳಿಸಿದೆ.

ಭಾರಿ ಮಳೆಯ ಮುನ್ಸೂಚನೆ ನೀಡಲಾದ ಜಿಲ್ಲೆಗಳಲ್ಲಿ ಹಲವೆಡೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಹಾಗೂ ಭಾರಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.

ಶನಿವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಗದಗ ಜಿಲ್ಲೆಯ ನರಗುಂದದಲ್ಲಿ 10 ಸೆಂ.ಮೀ ಮಳೆಯಾಗಿದೆ. ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ 9 ಸೆಂ.ಮೀ, ವಿಜಯಪುರ, ಕೋಲಾರ, ಯಾದಗಿರಿ ಜಿಲ್ಲೆಯ ಹುಣಸಗಿಯಲ್ಲಿ ತಲಾ 7 ಸೆಂ.ಮೀ. ಮಳೆ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.