ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ಉತ್ತರ, ದಕ್ಷಿಣ ಹಾಗೂ ಕರಾವಳಿ ಕರ್ನಾಟಕದ ಒಟ್ಟು 24 ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಾರ್ಚ್ 31ರಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ದಕ್ಷಿಣ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಕೊಡಗು, ಮಂಡ್ಯ, ತುಮಕೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಕಲಬುರಗಿ, ಬೀದರ್, ಗದಗ ಹಾಗೂ ಹಾವೇರಿ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ಆರು ದಿನ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಗುರವಾಗಿ ಮಳೆಯಾದರೆ, ಕೆಲವು ಕಡೆಗಳಲ್ಲಿ ಗುಡುಗು ಕೂಡ ಇರಲಿದೆ.

ಉತ್ತರ ಕರ್ನಾಟಕದ ಕಲಬುರಗಿಯಲ್ಲಿ ಉಷ್ಣಾಂಶದ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಸೋಮವಾರ 39.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ರಾಯಚೂರು, ಕೊಪ್ಪಳ, ವಿಜಯಪುರ, ಬೀದರ್ನಲ್ಲೂ ಉಷ್ಣಾಂಶ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.