ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ಇದೇ 15ರಿಂದ 24ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

ಡಿಸೆಂಬರ್ 14 ರಂದು ಚುನಾವಣೆ ನಡೆಯಲಿದೆ. ಇದೇ 25ರಂದು ಮಧ್ಯಾಹ್ನ 4 ಗಂಟೆಗೆ ನಾಮಪತ್ರಗಳ ಪರಿಶೀಲನೆ ನಡೆಸಿ, ಪ್ರಾಥಮಿಕ ಪಟ್ಟಿ ಪ್ರಕಟಿಸಲಾಗುತ್ತದೆ. ನಾಮಪತ್ರಗಳನ್ನು ಹಿಂಪಡೆಯಲು 28ರ ಮಧ್ಯಾಹ್ನ 12ರಿಂದ ಸಂಜೆ 4 ಗಂಟೆವರೆಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳ ಅಂತಿಮ ಪಟ್ಟಿಯು 29ರಂದು ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಡಿ.14ರಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಅವಕಾಶ ನೀಡಲಾಗಿದೆ ಎಂದು ಚುನಾವಣಾಧಿಕಾರಿ ಪ್ರತಿಭಾ ಆರ್. ತಿಳಿಸಿದ್ದಾರೆ.

ಬೆಂಗಳೂರಿನ ಶಂಕರಪುರದಲ್ಲಿರುವ ಅಶೋಕ ಶಿಶುವಿಹಾರದಲ್ಲಿ ಮತದಾನ ನಡೆಯಲಿದೆ. ಅದೇ ದಿನ ಸಂಜೆ ಫಲಿತಾಂಶ ಘೋಷಿಸಲಾಗುವುದು ಎಂದು ಹೇಳಿದ್ದಾರೆ.

ಸಂಘದ ಮತದಾರರ ಪಟ್ಟಿಯಲ್ಲಿರುವ ವಿಳಾಸಗಳಿಗೆ ಚುನಾವಣಾ ಮಾಹಿತಿಗಳನ್ನು ಅಂಚೆ ಮೂಲಕ ಕಳುಹಿಸಲಾಗುತ್ತದೆ. ವಿಳಾಸ ಬದಲಾದವರು ಅಥವಾ ಬದಲಾಯಿಸುವರು ಇದೇ 19ರ ಒಳಗೆ ಮೊ.ಸಂಖ್ಯೆ 9945294865ಕ್ಕೆ ಸಂಪರ್ಕಿಸಬೇಕು. ನಂತರ ಯಾವುದೇ ಬದಲಾವಣೆಗೆ ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.