ಪೀಣ್ಯ ದಾಸರಹಳ್ಳಿ: ‘ಬಸವಣ್ಣನವರು ಸಮಾಜದಲ್ಲಿ ಜಾತಿ ಪದ್ಧತಿ ನಿರ್ಮೂಲನೆ, ಮಹಿಳೆಯರ ಉನ್ನತಿ, ಸಬಲೀಕರಣಕ್ಕೆ ಪ್ರಾಶಸ್ತ್ಯ ನೀಡಿದ್ದರು’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದರು.

ವೀರಶೈವ- ಲಿಂಗಾಯಿತ ಕ್ಷೇಮಾಭಿವೃದ್ಧಿ ವೇದಿಕೆ, ಕಾಯಕಯೋಗಿ ಸಹಕಾರ ಸಂಘ ಮತ್ತು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ದಾಸರಹಳ್ಳಿ ಘಟಕ ವತಿಯಿಂದ ಆಯೋಜಿಸಿದ್ದ ಬಸವ ಜಯಂತಿ ಸಮಾರಂಭದಲ್ಲಿ ಅವರು ಮಾತನಾಡಿದರು.

ಬಸವಣ್ಣನವರ ಮುಖ್ಯ ಉದ್ದೇಶ ಮಹಿಳೆಯರ ಸರ್ವಾಂಗೀಣ ಪ್ರಗತಿ ಹಾಗೂ ಮಹಿಳೆಯರಿಗೆ ಸಮಾನತೆ, ವಿವೇಚನೆಯ ಅರಿವು ಮೂಡಿಸುವುದೇ ಆಗಿತ್ತು ಎಂದರು.

ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಜಯದೇವ್ ಸಾರಥ್ಯದಲ್ಲಿ ಬಸವೇಶ್ವರರ ಪುತ್ಥಳಿಯನ್ನು ಸಾರೋಟಿನಲ್ಲಿ ಡಿಜೆ ಮತ್ತು ವಚನ ಗೀತೆಗಳೊಂದಿಗೆ ಕಾಯಕಯೋಗಿ ಸಹಕಾರ ಸಂಘದ ಕಚೇರಿಯಿಂದ ದಾಸರಹಳ್ಳಿ ಮುಖ್ಯರಸ್ತೆ ಮೂಲಕ ಶ್ರೀ ಸಾಯಿ ಕಲ್ಯಾಣ ಮಂಟಪದವರೆಗೂ ಮೆರವಣಿಗೆ ಮಾಡಲಾಯಿತು.

ನೆಲಮಂಗಲದ ಪವಾಡ ಬಸವಣ್ಣ ದೇವರ ಮಠದ ಸಿದ್ದಲಿಂಗ ಸ್ವಾಮೀಜಿ, ಶಾಸಕ ಎಸ್. ಮುನಿರಾಜು, ಮಾಜಿ ಮೇಯರ್ ಗಂಗಾಂಬಿಕಾ ಮಲ್ಲಿಕಾರ್ಜುನ, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ. ಮರಿಸ್ವಾಮಿ, ವೇದಿಕೆಯ ಅಧ್ಯಕ್ಷ ಬಸವರಾಜಣ್ಣ, ದಾಸರಹಳ್ಳಿ ಕ್ಷೇತ್ರ ಘಟಕ ಕನ್ನಡ ಜಾನಪದ ಪರಿಷತ್ ಅಧ್ಯಕ್ಷ ವೈ.ಬಿ.ಎಚ್. ಜಯದೇವ್, ಎಂ.ಕೆ ಜಗದೀಶ್, ಶ್ರೀ ಶಿವ ಸಾಯಿ ಎಲೆಕ್ಟ್ರಾನಿಕ್ಸ್ ಮಾಲೀಕ ಸಿದ್ದಲಿಂಗಪ್ಪ, ಎಂ.ಬಿ. ದಯಾನಂದ್, ಎಂ.ಎಸ್. ಬಸವರಾಜು, ಪಿ.ಎಚ್. ರಾಜು, ರಾಜೇಂದ್ರ, ಬಿ.ಟಿ.ಸುರೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.