ಬಿ.ಎಸ್. ಯಡಿಯೂರಪ್ಪ ಹಿಂದೂ ಧರ್ಮದವರಲ್ಲ: ಲಿಂಗಾಯತರ ಮಹಾಸಭಾ

ತುಮಕೂರು: ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಅವರು ಹಿಂದೂ ಧರ್ಮಕ್ಕೆ ಸೇರಿದವರಲ್ಲ. ಅವರು ಲಿಂಗಾಯತ ಧರ್ಮಕ್ಕೆ ಸೇರಿದವರು ಎಂದು ಅಖಿಲ ಭಾರತ ವೀರಶೈವ ಲಿಂಗಾಯತರ ಮಹಾಸಭಾ ಹೇಳಿದೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಾಸಭಾದ ಪ್ರಧಾನ ಕಾರ್ಯದರ್ಶಿ ನಟರಾಜ ಸಾಗರನಹಳ್ಳಿ, ಹಿಂದೂ ಧರ್ಮ ಮತ್ತು ಲಿಂಗಾಯತ ಧರ್ಮದ ಆಚರಣೆಯಲ್ಲಿ ಕೆಲವು ವ್ಯತ್ಯಾಸಗಳಿವೆ ಎಂದರು.
‘ಲಿಂಗಾಯತರು ಹಿಂದೂ ಧರ್ಮಕ್ಕೆ ಸೇರಿಲ್ಲ. ನಾವು ಪ್ರತ್ಯೇಕ ಧರ್ಮವಾಗಿ ಗುರುತಿಸಿಕೊಂಡಿದ್ದೇವೆ. ಹಾಗಾಗಿಯೇ ನಮ್ಮನ್ನು ಪ್ರತ್ಯೇಕ ಲಿಂಗಾಯತ ಧರ್ಮವೆಂದು ಘೋಷಿಸುವಂತೆ ಕೇಳಿಕೊಳ್ಳುತ್ತಿರುವುದು’ ಎಂದು ಸಮರ್ಥಿಸಿಕೊಂಡರು.
‘ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಬೇಕು’ ಎಂದು ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ ಅವರು ಪ್ರತಿಪಾದಿಸಿರುವುದು ಸರಿಯಾಗಿಯೇ ಇದೆ. ಅದರಲ್ಲಿ ತಪ್ಪೇನೂ ಇಲ್ಲ’ ಎಂದು ಸಮರ್ಥಿಸಿಕೊಂಡರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.