ಶುಕ್ರವಾರ, 23 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಎಸ್‌: ಒಂದು ಹೆಚ್ಚುವರಿ ಅವಕಾಶಕ್ಕೆ ಮನವಿ

Published 5 ಡಿಸೆಂಬರ್ 2023, 19:58 IST
Last Updated 5 ಡಿಸೆಂಬರ್ 2023, 19:58 IST
ಅಕ್ಷರ ಗಾತ್ರ

ಬೆಂಗಳೂರು: ‘ಕೆಪಿಎಸ್‌ಸಿ, 276 ಕೆಎಎಸ್‌ ಹುದ್ದೆಗಳಿಗೆ ಶೀಘ್ರವೇ ಅಧಿಸೂಚನೆ ಹೊರಡಿಸುವ ಸಾಧ್ಯತೆಯಿದ್ದು, 2011ರಲ್ಲಿ ಕೆಎಎಸ್ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು ಪರಿಗಣಿಸದೆ ಒಂದು ಹೆಚ್ಚುವರಿ ಅವಕಾಶ ನೀಡಬೇಕು’ ಎಂದು ರಾಜ್ಯ ದಲಿತ ಪದವೀಧರರ ಸಂಘವು ಆಗ್ರಹಿಸಿದೆ.

’2019ರಲ್ಲಿ ಕೋವಿಡ್‌ ಕಾರಣಕ್ಕೆ ಹಿಂದಿನ ಸರ್ಕಾರ ಆರ್ಥಿಕ ಬಿಕ್ಕಟ್ಟಿನ ಸಲುವಾಗಿ ಮೂರು ವರ್ಷಗಳ ಕಾಲ ಹುದ್ದೆಗಳ ನೇಮಕಾತಿ ತಡೆಹಿಡಿಯಲಾಗಿತ್ತು. 2011ರ ಕೆಎಎಸ್‌ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಎರಡು ಬಾರಿ ಹಾಗೂ ಹೈಕೋರ್ಟ್‌ ಮೂರು ಬಾರಿ ತೀರ್ಪು ನೀಡಿತ್ತು. ಇದರ ವಿರುದ್ಧವಾಗಿ ಸರ್ಕಾರವು 2021ರಲ್ಲಿ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ಹುದ್ದೆಗಳನ್ನು ನೀಡಿತ್ತು. ಆದರೆ, 2011ರಲ್ಲಿ ಪರೀಕ್ಷೆ ಬರೆದು ಅನ್ಯಾಯಕ್ಕೆ ಒಳಗಾದ ಅಭ್ಯರ್ಥಿಗಳಿಗೆ ಸರ್ಕಾರ ಯಾವುದೇ ಸಾಮಾಜಿಕ ನ್ಯಾಯ ನೀಡಿಲ್ಲ’ ಎಂದು ಸಂಘದ ಅಧ್ಯಕ್ಷ ವಿ. ಲೋಕೇಶ್‌ ಅವರು ದೂರಿದ್ದಾರೆ.

ಕಳೆದ 9 ವರ್ಷಗಳಿಂದ ಕೆಎಎಸ್‌ ಹುದ್ದೆಗಳನ್ನು ಭರ್ತಿ ಮಾಡದೆ ವಿಳಂಬ ಮಾಡಲಾಗಿದೆ. ಕೆಎಎಸ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಒಂದು ಹೆಚ್ಚುವರಿ ಅವಕಾಶ ನೀಡುವಂತೆ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ. ಈಗಲಾದರೂ ಒಂದು ಹೆಚ್ಚುವರಿ ಅವಕಾಶ ನೀಡುವಂತೆ ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT