ಬೆಂಗಳೂರು: ಶಿವಮೊಗ್ಗ ಜಿಲ್ಲೆ ಸೊರಬ ಪಟ್ಟಣದಲ್ಲಿನ ಸ್ಪರ್ಧಾ ಪರೀಕ್ಷೆಗಳ ತರಬೇತಿ ಕೇಂದ್ರ (ಕಾಂಪಿಟೇಟಿವ್ ಸಕ್ಸಸ್ ವೆನ್ಯೂ) ಕೆಎಎಸ್ ಹಾಗೂ ಇನ್ನಿತರ ಸ್ಪರ್ಧಾ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಬೆಂಗಳೂರಿನ ಜಿ.ಹೆಚ್. ಫೌಂಡೇಷನ್ ಸೊರಬ ಪಟ್ಟಣದಲ್ಲಿ ತರಬೇತಿ ಕೇಂದ್ರ ನಡೆಸುತ್ತಿದ್ದು, ಪ್ರತಿ ವರ್ಷ ಸ್ಪರ್ಧಾ ಪರೀಕ್ಷೆಗಳನ್ನು ತೆಗೆದುಕೊಳ್ಳುವ ನೂರಾರು ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುತ್ತಿದೆ. ಕರ್ನಾಟಕ ಲೋಕಸೇವಾ ಆಯೋಗ ಈಚೆಗೆ 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಯ ಪ್ರಕ್ರಿಯೆ ಆರಂಭಿಸಿದ್ದು, ಪೂರ್ವಭಾವಿ ಪರೀಕ್ಷೆ ತೆಗೆದುಕೊಳ್ಳಲು ಬಯಸುವ ಅಭ್ಯರ್ಥಿಗಳು ತರಬೇತಿಗೆ ಅರ್ಜಿ ಸಲ್ಲಿಸಬಹುದು.
ಜ್ಞಾನ ಸಹ್ಯಾದ್ರಿ ಇಂಟರ್‌ನ್ಯಾಷನಲ್ ಸ್ಕೂಲ್, ಗುಂಡಶೆಟ್ಟಿಕೊಪ್ಪ, ಸೊರಬ ತಾಲ್ಲೂಕು, ಶಿವಮೊಗ್ಗ ಜಿಲ್ಲೆ–ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್: 9980748610, 7259340444 ಸಂಪರ್ಕಿಸಬಹುದು.