ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸ್ಯ ನಟ ಉಮೇಶ್‌ಗೆ ‘ರಾಜ್‌ಕುಮಾರ್ ಸಾಂಸ್ಕೃತಿಕ ದತ್ತಿ ಪ್ರಶಸ್ತಿ’

Published 20 ಫೆಬ್ರುವರಿ 2024, 16:14 IST
Last Updated 20 ಫೆಬ್ರುವರಿ 2024, 16:14 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಡಾ. ರಾಜ್‌ಕುಮಾರ್ ಸಾಂಸ್ಕೃತಿಕ ದತ್ತಿ ಪ್ರಶಸ್ತಿ’ಗೆ ಹಾಸ್ಯ ನಟ ಎಂ.ಎಸ್.ಉಮೇಶ್ ಆಯ್ಕೆಯಾಗಿದ್ದಾರೆ.

ಕಸಾಪ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ₹ 25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ರಾಜ್‌ಕುಮಾರ್ ಅವರು ತಮಗೆ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ ಬಂದಾಗ ನಗದು ಮೊತ್ತವನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿನಿಧಿ ಸ್ಥಾಪಿಸಿದ್ದರು. ನಂತರದಲ್ಲಿ ನಿರ್ಮಾಪಕಿ ಪಾರ್ವತಮ್ಮ ರಾಜ್‌ಕುಮಾರ್ ಅವರು ಈ ದತ್ತಿನಿಧಿಗೆ ಇನ್ನಷ್ಟು ಮೊತ್ತವನ್ನು ಸೇರಿಸಿದ್ದರು. 

‘ಎಂ.ಎಸ್. ಉಮೇಶ್ ಅವರು ಕೆ. ಹಿರಣ್ಣಯ್ಯ ಮಿತ್ರ ಮಂಡಲಿ, ಗುಬ್ಬಿ ಕಂಪನಿಯಲ್ಲಿ ಬಾಲನಟರಾಗಿ ಪ್ರಸಿದ್ಧಿ ಪಡೆದಿದ್ದರು. ಪುಟ್ಟಣ್ಣ ಕಣಗಾಲ್ ಅವರ ಕಥಾ ಸಂಗಮದ ಮೂಲಕ ಬೆಳ್ಳಿತೆರೆಗೆ ಮರಳಿದ ಅವರು, ಈವರೆಗೂ 400ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ವೈವಿಧ್ಯಮಯ ಪಾತ್ರಗಳಲ್ಲಿ ಅಭಿನಯಿಸಿರುವ ಅವರಿಗೆ ಹಾಸ್ಯ ಪಾತ್ರಗಳು ಗೌರವ ತಂದುಕೊಟ್ಟಿವೆ’ ಎಂದು ಕಸಾಪ ಪ್ರಕಟಣಾ ವಿಭಾಗದ ಸಂಚಾಲಕ ಎನ್.ಎಸ್.ಶ್ರೀಧರ ಮೂರ್ತಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT