ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡಿಗರಿಗೆ ಶೇ 50 ಉದ್ಯೋಗ: ಆಗ್ರಹ

ಚಾಮರಾಜನಗರದಲ್ಲಿ ಕಸಾಪ ಸರ್ವ ಸದಸ್ಯರ ಮಹಾ ಅಧಿವೇಶನದಲ್ಲಿ ನಿರ್ಣಯ
Last Updated 30 ಸೆಪ್ಟೆಂಬರ್ 2019, 19:03 IST
ಅಕ್ಷರ ಗಾತ್ರ

ಬೆಂಗಳೂರು: ‘ಚಾಮರಾಜನಗರದಲ್ಲಿ ಕನ್ನಡ ಸಾಹಿತ್ಯ ಪರಿಷತ್‌ನ ಸರ್ವ ಸದಸ್ಯರ ಮಹಾ ಅಧಿವೇಶನದಲ್ಲಿ, ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ 50ರಷ್ಟು ಮೀಸಲು ಒದಗಿಸಬೇಕು ಎಂಬ ನಿರ್ಣಯ ಕೈಗೊಳ್ಳಲಾಗಿದೆ’ ಎಂದು ಪರಿಷತ್‌ನ ಅಧ್ಯಕ್ಷ ಮನು ಬಳಿಗಾರ್‌ ಹೇಳಿದರು.

ನಗರದಲ್ಲಿ ಸೋಮವಾರ ನಡೆದ ಕನ್ನಡ ಪರ ಹೋರಾಟಗಾರ ಜಿ. ನಾರಾಯಣಕುಮಾರ್ ಸ್ಮರಣೆ ಸಮಾರಂಭದಲ್ಲಿ ಮಾತನಾಡಿದ ಅವರು, ‘ಈ ನಿರ್ಣಯವನ್ನು ಸರ್ಕಾರದ ಗಮನಕ್ಕೆ ತರಲಾಗುವುದು ಮತ್ತು ಇದನ್ನು ಅನುಷ್ಠಾನಗೊಳಿಸುವಂತೆ ಒತ್ತಾಯಿಸಲಾಗುವುದು’ ಎಂದರು.

‘ಇಂಗ್ಲಿಷ್‌ ಮಾಧ್ಯಮದ ಎಲ್ಲ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಕಡ್ಡಾಯವಾಗಿ ಕಲಿಸಬೇಕು ಎಂಬ ನಿರ್ಣಯ ಕೈಗೊಳ್ಳಲಾಗಿದೆ’ ಎಂದು ಅವರು ಹೇಳಿದರು.

‘ಇದು ಕನ್ನಡನಾಡು. ಕನ್ನಡಿಗರ ಮಾತೇ ಪ್ರಧಾನವಾಗಬೇಕು. ಕನ್ನಡಿಗರು ಕೇವಲ ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ಮಾತ್ರ ತೃಪ್ತಿ ಪಟ್ಟುಕೊಳ್ಳಬೇಕೇ’ ಎಂದು ಪ್ರಶ್ನಿಸಿದ ಅವರು,‘ಉನ್ನತ ಹುದ್ದೆಗಳನ್ನು ಪಡೆದು ಕೊಳ್ಳುವ ಹಕ್ಕು ಎಲ್ಲ ಕನ್ನಡಿಗರಿಗೂ ಇದೆ’ ಎಂದರು.

ವಿಮರ್ಶಕ ಡಾ. ಬೈರಮಂಗಲ ರಾಮೇಗೌಡ, ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ, ಜಾನಪದ ಕೋಗಿಲೆ ಡಾ.ಅಪ್ಪಗೆರೆ ತಿಮ್ಮರಾಜು, ಕನ್ನಡ ಹೋರಾಟಗಾರ ನಾ.ಶ್ರೀಧರ್ ಹಾಗೂ ರಂಗಭೂಮಿ ಕಲಾವಿದ ಕೃಷ್ಣಮೂರ್ತಿ ಅವರಿಗೆ ‘ಜಿನಾಕು’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಸಂಶೋಧಕ ಚಿದಾನಂದ ಮೂರ್ತಿ ಕಾರ್ಯಕ್ರಮ ಉದ್ಘಾಟಿಸಿದರು.

ಕನ್ನಡ ಹೋರಾಟಗಾರ ರಾ.ನಂ.ಚಂದ್ರಶೇಖರ್ ಹಾಗೂ ಬಿಜೆಪಿ ಮುಖಂಡ ನೆ.ಲ.ನರೇಂದ್ರಬಾಬು,ಕನ್ನಡ ಚಳವಳಿ ಕೇಂದ್ರ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣ ಕುರ್ಮಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT