ಶುಕ್ರವಾರ, ಅಕ್ಟೋಬರ್ 30, 2020
27 °C
ಅಭ್ಯರ್ಥಿಗಳಿಗೆ ಕೃಪಾಂಕ ನೀಡುವಂತೆ ಒತ್ತಾಯ

ಪ್ರಶ್ನೆ ಪತ್ರಿಕೆಯಲ್ಲಿ ಆಂಗ್ಲ ಪದ ಬಳಕೆಗೆ ಕಸಾಪ ಆಕ್ಷೇಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸಿವಿಲ್‌ (ನಾಗರಿಕ ) ಪೊಲೀಸ್ ಸಾಮಾನ್ಯ ಪ್ರವೇಶ ಪರೀಕ್ಷೆಯ ಕನ್ನಡ ಮಾಧ್ಯಮ  ಪ್ರಶ್ನೆಪತ್ರಿಕೆಯಲ್ಲಿ ಯಥೇಚ್ಛವಾಗಿ ಆಂಗ್ಲ ಪದಗಳನ್ನು ಬಳಕೆ ಮಾಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮನು ಬಳಿಗಾರ್, ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಕೃಪಾಂಕ ನೀಡಬೇಕೆಂದು ಒತ್ತಾಯಿಸಿದ್ದಾರೆ. 

ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಹಾಗೂ ಗೃಹ ಕಾರ್ಯದರ್ಶಿ ಡಿ. ರೂಪಾ ಅವರಿಗೆ ಪತ್ರ ಬರೆದಿದ್ದಾರೆ. 

‘ಪ್ರಶ್ನೆ ಪತ್ರಿಕೆ ದೋಷಪೂರಿತವಾಗಿದ್ದು, ಇಂಗ್ಲಿಷ್ ಪದಗ ಳನ್ನು ಕನ್ನಡದ ಲಿಪಿ ಯಲ್ಲಿ ಬರೆಯ ಲಾಗಿದೆ. ಕನ್ನಡ ವನ್ನು ಕ್ರಿಯಾಪದದ ಮಟ್ಟದಲ್ಲಿ ಮಾತ್ರ ಬಳಕೆ ಮಾಡಲಾಗಿದೆ. ಪ್ರಶ್ನೆಯ ಬಹುತೇಕ ಪದಗಳು ಆಂಗ್ಲ ಭಾಷೆ ಯದ್ದಾಗಿದೆ. ಇದು ಕನ್ನಡದ ಬಗ್ಗೆ ಇರುವ ತಾತ್ಸಾರ ಭಾವನೆಯನ್ನು ತೋರಿಸುತ್ತದೆ. ಪ್ರಶ್ನೆ ಪತ್ರಿಕೆಯಲ್ಲಿನ ದೋಷದಿಂದ ಗ್ರಾಮೀಣ ಭಾಗದ ಅಭ್ಯರ್ಥಿಗಳು ಕಡಿಮೆ ಅಂಕ ಪಡೆಯುವ ಸಾಧ್ಯತೆಯಿದೆ. ಹಾಗಾಗಿ ಕೃಪಾಂಕ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು