ಶನಿವಾರ, ಆಗಸ್ಟ್ 15, 2020
27 °C

ಶೇ 20 ಕೈಗಾರಿಕೆಗಳು ಬಂದ್‌– ಕಾಸಿಯಾ ಕಳವಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕೈಗಾರಿಕಾ ಪ್ರದೇಶಗಳಿಗೆ ಸಮರ್ಪಕವಾಗಿ ಸರಕುಗಳು ಪೂರೈಕೆಯಾಗುವ ಮೂಲಕ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಸ್‍ಎಂಇ) ಕಾರ್ಯಾಚರಣೆಯಲ್ಲಿ ಯಾವುದೇ ಅಡೆತಡೆಗಳು ಉಂಟಾಗದಂತೆ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಅಧ್ಯಕ್ಷ ಕೆ.ಬಿ.ಅರಸಪ್ಪ ಒತ್ತಾಯಿಸಿದರು.

ಕೈಗಾರಿಕಾ ಕ್ಷೇತ್ರಕ್ಕೆ ಅನುಕೂಲವಾಗುವಂತಹ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು. 

‘ಲಾಕ್‍ಡೌನ್‍ನಿಂದ ಶೇ 20ರಷ್ಟು ಉದ್ಯಮಗಳು ಶಾಶ್ವತವಾಗಿ ಮುಚ್ಚುವ ಸ್ಥಿತಿ ತಲುಪಿವೆ. ಎರಡನೇ ಲಾಕ್‍ಡೌನ್ ಜಾರಿಯಾದರೆ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳ ಅಸ್ತಿತ್ವ ಏನಾಗಬಹುದು ಎಂದು ಬಹುತೇಕ ಉದ್ದಿಮೆದಾರರು ಕಳವಳ ವ್ಯಕ್ತಪಡಿಸಿದ್ದಾರೆ. ದೀರ್ಘಕಾಲದವರೆಗೆ ಉತ್ಪಾದನೆ ಸ್ಥಗಿತಗೊಳಿಸುವುದರಿಂದ ಕೈಗಾರಿಕೆಗಳು ಬದುಕುಳಿಯಲು ಸಾಧ್ಯವಿಲ್ಲ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.