‘ವಿದ್ಯುತ್ ದರ ಹೆಚ್ಚಳದಿಂದ ಆಘಾತ’

ಬೆಂಗಳೂರು: ಇಂಧನ ಹೊಂದಾಣಿಕೆ ಶುಲ್ಕ ಪರಿಷ್ಕರಿಸಲು ಎಲ್ಲ ಎಸ್ಕಾಂಗಳಿಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಅನುಮತಿ ನೀಡಿರುವುದು ಎಂಎಸ್ಎಂಇಗಳಿಗೆ ಮಾರಕವಾಗಿ ಪರಿಣಮಿಸಿದೆ ಎಂದು ಕಾಸಿಯಾ ಅಧ್ಯಕ್ಷ ಕೆ.ಎನ್. ನರಸಿಂಹಮೂರ್ತಿ ತಿಳಿಸಿದ್ದಾರೆ.
ಸೂಕ್ಷ್ಮ ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳು ಕಳೆದ ಹಲವಾರು ವರ್ಷಗಳಿಂದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಆರ್ಥಿಕ ಕುಸಿತ, ಕೋವಿಡ್‌ನಂತಹ ಸಾಂಕ್ರಾಮಿಕ ರೋಗ ಮತ್ತು ಇದೀಗ ದೇಶಿಯ ಹಣದುಬ್ಬರ ಹಾಗೂ ಜಾಗತಿಕ ಆರ್ಥಿಕ ಹಿಂಜರಿತದ ರೂಪದಲ್ಲಿ ಪತನದ ಹಾದಿ ಹಿಡಿಯುತ್ತಿವೆ ಎಂದು ವಿವರಿಸಿದ್ದಾರೆ.
ಉದ್ಯಮಗಳು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಮಧ್ಯೆ ಕೆಇಆರ್‌ಸಿ ಮೂಲಕ ಸರ್ಕಾರವು ಏಪ್ರಿಲ್‌ನಲ್ಲಿ ವಿದ್ಯುತ್ ದರ ಹೆಚ್ಚಿಸಿತು. ನಂತರ, ಜೂನ್
ನಲ್ಲಿ ಮತ್ತು ಈ ವರ್ಷದಲ್ಲೇ ಮೂರನೆ ಬಾರಿಗೆ ಸುಂಕವನ್ನು ಹೆಚ್ಚಿಸಲು ಕೆಇಆರ್
ಸಿಗೆ ಅನುಮತಿ ನೀಡಿರುವುದು ಎಂ
ಎಸ್ಎಂಇಗಳಿಗೆ ಮಾರಕವಾಗುವುದಲ್ಲದೇ ಸಣ್ಣ ಕೈಗಾರಿಕೆಗಳ ಬೆಳವಣಿಗೆಯಲ್ಲಿ ಕುಂಠಿತವಾಗಲಿದೆ ಎಂದು ಕಾಸಿಯಾ ಅಧ್ಯಕ್ಷರು ಆತಂಕ ವ್ಯಕ್ತಪಡಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.