ಸೋಮವಾರ, ಅಕ್ಟೋಬರ್ 26, 2020
28 °C

ಎಸಿಬಿ ಬಲೆಗೆ ನರ್ಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹೆರಿಗೆಗೆ ದಾಖಲಾದ ಮಹಿಳೆಯ ಸಂಬಂಧಿಕರಿಂದ ದಿನಕ್ಕೆ ₹500 ಲಂಚ ಪಡೆಯುತ್ತಿದ್ದ ಆರೋಪದಲ್ಲಿ ಕೆ.ಸಿ. ಜನರಲ್ ಆಸ್ಪತ್ರೆ ಸ್ಟಾಫ್ ನರ್ಸ್‌ ಒಬ್ಬರನ್ನು ಭ್ರಷ್ಟಾಚಾರ ನಿಗ್ರಹ ದಳದ(ಎಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.

ಉತ್ತರ ತಾಲ್ಲೂಕಿನ ಗೋಪಾಲಪುರದ ನಿವಾಸಿಯೊಬ್ಬರು ತಮ್ಮ ಹೆಂಡತಿಯನ್ನು ಹೆರಿಗೆಗಾಗಿ ಕೆ.ಸಿ. ಜನರಲ್ ಆಸ್ಪತ್ರೆಗೆ ದಾಖಲಿಸಿದ್ದರು.  ದಿನಕ್ಕೆ ₹500 ನೀಡಿದರೆ ಮಾತ್ರ ಚಿಕಿತ್ಸೆ ನೀಡುವುದಾಗಿ ರೋಗಿಯ ಸಂಬಂಧಿಕರನ್ನು ಹೆರಿಗೆ ವಿಭಾಗದ ನರ್ಸ್ ಮತ್ತು ಇತರ ಸಿಬ್ಬಂದಿ ಬೆದರಿಸಿ ಹಣ ಪಡೆಯುತ್ತಿದ್ದರು.

‘ಮಗು ತೋರಿಸಲು ₹700 ಪಡೆದಿದ್ದು, ಇದರಿಂದ ಬೇಸತ್ತ ವ್ಯಕ್ತಿ ನೀಡಿದ ದೂರು ಆಧರಿಸಿ ಕಾರ್ಯಚರಣೆ ನಡೆಸಲಾಗಿದೆ. ನರ್ಸ್‌ ಕೋಕಿಲಾ ₹500 ಲಂಚ ಪಡೆಯುವಾಗ ದಾಳಿ ನಡೆಸಿ ಬಂಧಿಸಲಾಗಿದೆ’ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.