ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಕೆ.ಸಿ. ಜನರಲ್ ಆಸ್ಪತ್ರೆ: ರೋಗಿ ಮೇಲೆ ಹಲ್ಲೆ ಆರೋಪ

Published 25 ಮೇ 2024, 14:43 IST
Last Updated 25 ಮೇ 2024, 14:43 IST
ಅಕ್ಷರ ಗಾತ್ರ

ಬೆಂಗಳೂರು: ಕೆ.ಸಿ. ಜನರಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದ ವೆಂಕಟೇಶ್ ಎಂಬುವವರ ಮೇಲೆ ಹಲ್ಲೆ ನಡೆದಿರುವ ಆರೋಪ ವ್ಯಕ್ತವಾಗಿದ್ದು, ಘಟನೆ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

‘ನೆಲಮಂಗಲದ ವೆಂಕಟೇಶ್‌ ಮೇಲೆ ಹಲ್ಲೆ ನಡೆದಿರುವುದಾಗಿ ಸಂಬಂಧಿಕರು ಆರೋಪಿಸುತ್ತಿದ್ದಾರೆ. ಆಸ್ಪತ್ರೆಯಲ್ಲಿ ಪರಿಶೀಲಿಸಲಾಗಿದೆ. ಹಲ್ಲೆ ಬಗ್ಗೆ ಪುರಾವೆಗಳು ಸಿಕ್ಕಿಲ್ಲ. ಸಂಬಂಧಿಕರು ಯಾವುದೇ ದೂರು ಸಹ ನೀಡಿಲ್ಲ’ ಎಂದು ಮಲ್ಲೇಶ್ವರ ಠಾಣೆ ಪೊಲೀಸರು ಹೇಳಿದರು.

ಸಿಬ್ಬಂದಿಯಿಂದ ಹಲ್ಲೆ: ‘ವಿಷ ಕುಡಿದು ಅಸ್ವಸ್ಥಗೊಂಡಿದ್ದ ವೆಂಕಟೇಶ್ ಅವರನ್ನು ಕೆ.ಸಿ.ಜನರಲ್ ಆಸ್ಪತ್ರೆಗೆ ಮೇ 22ರಂದು ದಾಖಲಿಸಲಾಗಿತ್ತು. ಇದೇ ಸಂದರ್ಭದಲ್ಲಿ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ’ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

ಹಲ್ಲೆ ಆರೋಪದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿರುವ ಆಸ್ಪತ್ರೆ ವೈದ್ಯರು, ‘ಐಸಿಯುದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವುದು ಕಷ್ಟ. ಪ್ರಾಣಸಂಕಟದಿಂದ ಒದ್ದಾಡುವ ರೋಗಿಗಳು, ಚಿಕಿತ್ಸೆಗೆ ಅಡ್ಡಿಪಡಿಸುತ್ತಾರೆ. ಇಂಥ ರೋಗಿಗಳನ್ನು ನಿಯಂತ್ರಣ ಅಗತ್ಯ. ವೆಂಕಟೇಶ್ ವಿಚಾರದಲ್ಲೂ ಅವರನ್ನು ನಿಯಂತ್ರಿಸಿ ಚಿಕಿತ್ಸೆ ನೀಡಲಾಗಿದೆ. ಹಲ್ಲೆ ಮಾಡಿಲ್ಲ’ ಎಂದಿದ್ದಾರೆ.

‘ಹಲ್ಲೆ ಬಗ್ಗೆ ಪುರಾವೆಗಳು ಸಿಕ್ಕಿಲ್ಲ. ಸಂಬಂಧಿಕರೂ ದೂರು ನೀಡಿಲ್ಲ. ಸದ್ಯಕ್ಕೆ ಯಾವುದೇ ಕ್ರಮ ಜರುಗಿಸಿಲ್ಲ. ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT