ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ಸಿ. ಜನರಲ್ ಆಸ್ಪತ್ರೆ: ಪ್ರಾರಂಭ ಆಗದ ಮಕ್ಕಳ ಘಟಕ

Last Updated 8 ಅಕ್ಟೋಬರ್ 2022, 20:49 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ದಿನಗಳ ಹಿಂದೆ ಉದ್ಘಾಟಿಸಿದ್ದಕೆ.ಸಿ. ಜನರಲ್ ಆಸ್ಪತ್ರೆಯಲ್ಲಿನ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯತೀವ್ರ ನಿಗಾ ಘಟಕ (ಐಸಿಯು) ಪೂರ್ಣ ಪ್ರಮಾಣದಲ್ಲಿ ಸಜ್ಜುಗೊಂಡಿಲ್ಲ. ಇದರಿಂದಾಗಿ ಈ ಘಟಕದಲ್ಲಿ ವೈದ್ಯಕೀಯ ಸೇವೆಗಳು ಪ್ರಾರಂಭವಾಗಿಲ್ಲ.

ಕಳೆದ ಗುರುವಾರ (ಅ.6) ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 50 ಹಾಸಿಗೆಗಳ ಈ ಘಟಕವನ್ನು ಉದ್ಘಾಟಿಸಲಾಗಿತ್ತು. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ50 ಹಾಸಿಗೆಗಳ ಉಪಕೇಂದ್ರಕ್ಕೂ ಚಾಲನೆ ನೀಡಲಾಗಿತ್ತು. ಐಸಿಯು ಘಟಕದಲ್ಲಿ ವೈದ್ಯಕೀಯ ಉಪಕರಣಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಅಗತ್ಯ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಇದರಿಂದಾಗಿ ಈ ಘಟಕದಲ್ಲಿ ಸೇವೆ ಪ್ರಾರಂಭಿಸಲು ಇನ್ನಷ್ಟು ದಿನಗಳು ಬೇಕಾಗಲಿವೆ.

ಜಯದೇವ ಘಟಕವನ್ನು₹ 15 ಕೋಟಿ ಹಾಗೂ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ಘಟಕವನ್ನು ₹3.53 ಕೋಟಿ ವೆಚ್ಚದಲ್ಲಿ ಸ್ಥಾಪಿಸಲಾಗಿದೆ. ಈ ವೆಚ್ಚವನ್ನು ಸಂಸ್ಥೆಗಳಆಂತರಿಕ ಸಂಪನ್ಮೂಲಗಳಿಂದಲೇ ಭರಿಸಲಾಗಿದೆ.

‘ಕೇಂದ್ರ ಸಂಸ್ಥೆಯಿಂದ ವೈದ್ಯಕೀಯ ಉಪಕರಣಗಳನ್ನು ಸ್ಥಳಾಂತರ ಮಾಡಲಾಗಿದೆ.15 ವೈದ್ಯರು, 45 ಶುಶ್ರೂಷಕರ ನೇಮಕಾತಿಗೆ ಸರ್ಕಾರದಿಂದ ಅನುಮೋದನೆ ದೊರೆತಿದೆ. ಈ ತಿಂಗಳ ಅಂತ್ಯದ ಒಳಗಾಗಿ ವೈದ್ಯಕೀಯ ಸೇವೆಗಳನ್ನು ಪ್ರಾರಂಭಿಸಲಾಗುವುದು’ ಎಂದುಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯ ನಿರ್ದೇಶಕ ಡಾ. ಸಂಜಯ್ ಕೆ.ಎಸ್. ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT