ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆ ನಿರ್ಮಾಣ ವಿಳಂಬ: ಅಧಿಕಾರಿಗಳಿಗೆ ತರಾಟೆ

ಸಚಿವ ಸೋಮಶೇಖರ್ ಅಧ್ಯಕ್ಷತೆಯಲ್ಲಿ ಬೆಂಗಳೂರು ದಕ್ಷಿಣ ತಾ.ಪಂ ಕೆಡಿಪಿ ಸಭೆ
Last Updated 6 ಜೂನ್ 2022, 20:37 IST
ಅಕ್ಷರ ಗಾತ್ರ

ಬೆಂಗಳೂರು: ‘ಕೊಳಚೆ ನಿರ್ಮೂಲನಾ ಮಂಡಳಿಯಿಂದ ಬಡವರಿಗೆ ಹೊಸದಾಗಿ ಮನೆ ಕಟ್ಟಿಕೊಡುವುದಾಗಿ ಭರವಸೆ ನೀಡಿ ಮೂರು ವರ್ಷವಾದರೂ ಇನ್ನೂ ಪೂರ್ಣಗೊಂಡಿಲ್ಲ’ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ‘ಮನೆಯಿಲ್ಲದೆ ಜನ ರಸ್ತೆಯಲ್ಲಿ ವಾಸ ಮಾಡುವಂತಾಗಿದೆ. ಈ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ’ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

‘ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ 357, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ 503 ಮನೆಗಳ ನಿರ್ಮಾಣ ಮಾಡಲು ಮತ್ತೆ ಟೆಂಡರ್ ಕರೆಯಲಾಗಿದೆ’ ಎಂಬ ಅಧಿಕಾರಿಗಳು ಉತ್ತರಕ್ಕೆಅಸಮಾಧಾನವ್ಯಕ್ತಪಡಿಸಿದಸಚಿವರು,‘ಇನ್ನೂ ಟೆಂಡರ್ ಕರೆಯುವುದರಲ್ಲೇ ಇದ್ದರೆ ಜನರಿಗೆ ಮನೆಗಳನ್ನು ನಿರ್ಮಿಸಿಕೊಡುವುದು ಯಾವಾಗ’ ಎಂದು ತರಾಟೆಗೆ ತೆಗೆದುಕೊಂಡರು.

’ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಅಧಿಕಾರಿಗಳು ಕ್ರಮವಹಿಸಬೇಕು. ಅಗತ್ಯ ಪ್ರಮಾಣದ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಿಕೊಳ್ಳಬೇಕು’ ಎಂದು ಸೂಚಿಸಿದರು.

‘ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ವಿವಿಧ ಜಾತಿಯ 1.35 ಲಕ್ಷ ಸಸಿಗಳನ್ನು ಬೆಳೆಸಲಾಗಿದೆ. ಮಳೆಗಾಲ ಈಗ ಆರಂಭವಾಗಿರುವುದರಿಂದ ರೈತರಿಗೆ ಸಸಿಗಳನ್ನು ವಿತರಣೆ ಮಾಡಲಾಗಿದೆ. ಸಸಿಗಳನ್ನು ನಿರ್ವಹಣೆ ಮಾಡುವ ರೈತರಿಗೆ ಸರ್ಕಾರ ನೀಡುವ ಪ್ರೋತ್ಸಾಹಧನವನ್ನು ಕೂಡ ನೀಡಲಾಗುತ್ತಿದೆ’ ಎಂದು ಅಧಿಕಾರಿಗಳು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT