ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರಾತುರಿಯಲ್ಲಿ ಅಂತಿಮ ಪಟ್ಟಿ: ಆರೋಪ

Last Updated 24 ಸೆಪ್ಟೆಂಬರ್ 2019, 19:44 IST
ಅಕ್ಷರ ಗಾತ್ರ

ಬೆಂಗಳೂರು: ಪದವಿ ಶಿಕ್ಷಣ ಇಲಾಖೆಯ ಉಪನ್ಯಾಸಕರ ನೇಮಕಾತಿ ಸಂಬಂಧಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್‌ ಅವರಿಗೆ ತಪ್ಪು ವರದಿ ನೀಡಿದ್ದು, ತನ್ನ ತಪ್ಪುಗಳನ್ನು ಮರೆಮಾಚಿ ತರಾತುರಿಯಲ್ಲಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಮುಂದಾಗಿದೆ ಎಂದು ಆಕಾಂಕ್ಷಿಗಳು ದೂರಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪನ್ಯಾಸಕ ಹುದ್ದೆಯ ಆಕಾಂಕ್ಷಿ ಅರ್ಜುನ್, ‘ಕೆಇಎ ಸಲ್ಲಿಸಿರುವ ವರದಿಯಲ್ಲಿ ಅನೇಕ ಸುಳ್ಳುಗಳಿವೆ. ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ ಅಭ್ಯರ್ಥಿಗಳು ಮೇ ತಿಂಗಳಲ್ಲಿದೂರು ದಾಖಲಿಸಿದ್ದು, ನ್ಯಾಯಾಲಯಎಲ್ಲ ಪ್ರಕರಣಗಳನ್ನು ಮುಕ್ತಾಯಗೊಳಿಸಿರುವುದಾಗಿ ಸಚಿವರಿಗೆ ಸುಳ್ಳು ಮಾಹಿತಿ ನೀಡಿದ್ದಾರೆ. ಎಲ್ಲ ಪ್ರಕರಣಗಳು ವಿಚಾರಣೆ ಹಂತದಲ್ಲೇ ಇವೆ. ಈ ಬಗ್ಗೆ ಕೆಇಎಗೆ ಕರ್ನಾಟಕ ಆಡಳಿತ ನ್ಯಾಯಮಂಡಳಿ ನೋಟಿಸ್ ನೀಡಿದೆ. ಈ ಸಂಬಂಧ ಕೆಇಎ ತನ್ನ ವೆಬ್‌ಸೈಟ್‌ನಲ್ಲಿ ದೂರಿನ ಸಂಖ್ಯೆಗಳನ್ನು ಪ್ರಕಟಿಸಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT