ಗುರುವಾರ , ಜುಲೈ 29, 2021
21 °C

‘ಶೌಚಾಲಯವೂ ಸ್ವಚ್ಛವಾಗಿರಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 'ಗಾಂಧೀಜಿ ಕಂಡ ಗ್ರಾಮೀಣಾಭಿವೃದ್ಧಿ ಕನಸು ನನಸಾಗಬೇಕಾದರೆ, ನಾವು ಮಲಗುವ ಕೋಣೆಯ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಶೌಚಾಲಯಗಳಲ್ಲೂ ಸ್ವಚ್ಛತೆ ಕಾಪಾಡಬೇಕು' ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಕೆ.ಆರ್.ವೇಣುಗೋಪಾಲ್ ತಿಳಿಸಿದರು.

ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ, ರಾಜ್ಯ ಎನ್‍ಎಸ್‍ಎಸ್ ಕೋಶ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಶಿಕ್ಷಣ ಪರಿಷತ್‌ (ಎಂಜಿಎನ್‌ಸಿಆರ್‌ಇ) ಸಹಯೋಗದಲ್ಲಿ 'ಸ್ವಚ್ಛತಾ ಹಾಗೂ ಜಲ ಸಂರಕ್ಷಣೆ' ಕುರಿತು ಹಮ್ಮಿಕೊಂಡಿದ್ದ ಆನ್‍ಲೈನ್ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಎಂಜಿಎನ್‌ಸಿಆರ್‌ಇ ಯೋಜನಾ ನಿರ್ದೇಶಕ ಬಿ.ದಿವಾಕರ್, ಎನ್‍ಎಸ್‍ಎಸ್ ಸಂಯೋಜನಾಧಿಕಾರಿ ಡಾ. ಎನ್.ಸತೀಶ್ ಗೌಡ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು