ಕೆಂಪೇಗೌಡ ದಿನಾಚರಣೆ ನಾಳೆ

7

ಕೆಂಪೇಗೌಡ ದಿನಾಚರಣೆ ನಾಳೆ

Published:
Updated:

ಬೆಂಗಳೂರು: ಬಿಬಿಎಂಪಿ ವತಿಯಿಂದ ಇದೇ 16ರಂದು (ಗುರುವಾರ) ಕೆಂಪೇಗೌಡ ದಿನಾಚರಣೆ ಏರ್ಪಡಿಸಲಾಗಿದೆ.

ಬೆಳಿಗ್ಗೆ 8 ಗಂಟೆಗೆ ಮೇಯರ್‌ ಆರ್‌.ಸಂಪತ್‌ರಾಜ್‌ ಅವರು ನಾಡಪ್ರಭು ಕೆಂಪೇಗೌಡ ಹಾಗೂ ಅವರ ಸೊಸೆ ಲಕ್ಷ್ಮೀ ದೇವಿ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಬೆಂಗಳೂರು ಅಭಿವೃದ್ಧಿ ಸಚಿವ ಜಿ.ಪರಮೇಶ್ವರ ಹಾಗೂ ಮೇಯರ್‌ ಅವರು ಲಾಲ್‌ಬಾಗ್‌ ಗಡಿಗೋಪುರಕ್ಕೆ ಪೂಜೆ ಸಲ್ಲಿಸಿ ಜ್ಯೋತಿ ಯಾತ್ರೆ ಉದ್ಘಾಟಿಸಲಿದ್ದಾರೆ. ನಾಲ್ಕು ಗಡಿಗೋಪುರಗಳ ಬಳಿಯಿಂದ ಹಾಗೂ ಮಾಗಡಿ ಕೆಂಪಾಪುರದಲ್ಲಿರುವ ಕೆಂಪೇಗೌಡ ಸಮಾಧಿ ಬಳಿಯಿಂದ ಜ್ಯೋತಿ ಯಾತ್ರೆ ಹೊರಡಲಿದ್ದು, ಮಧ್ಯಾಹ್ನ 11ಕ್ಕೆ ಪಾಲಿಕೆ ಕೇಂದ್ರ ಕಚೇರಿ ಬಳಿ ಸಮಾಪನಗೊಳ್ಳಲಿದೆ. ಕಲಾತಂಡಗಳು ಹಾಗೂ ಸ್ತಬ್ಧಚಿತ್ರಗಳು ಯಾತ್ರೆಗೆ ರಂಗು ತುಂಬಲಿವೆ.

ಬೆಳಿಗ್ಗೆ 10 ಗಂಟೆಗೆ  ಕೋರಮಂಗಲದಲ್ಲಿರುವ ಲಕ್ಷ್ಮೀ ದೇವಿ ಸಮಾಧಿಗೆ ಪೂಜೆ ಸಲ್ಲಿಸಲಾಗುತ್ತದೆ. ಪಾಲಿಕೆ ಕೇಂದ್ರ ಕಚೇರಿ ಆವರಣದಲ್ಲಿರುವ ಡಾ.ರಾಜ್‌ಕುಮಾರ್‌ ಗಾಜಿನ ಮನೆಯಲ್ಲಿ ಅಧಿಕಾರಿಗಳಿಗೆ ಹಾಗೂ ನೌಕರರಿಗೆ ಮಧ್ಯಾಹ್ನ 2 ಗಂಟೆಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಸಂಜೆ 6ಗಂಟೆಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಕೆಂಪೇಗೌಡ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬಳಿಕ ಪಾಲಿಕೆ ನೌಕರರ ಕಲಾಸಂಘದವರು ‘ಶ್ರೀಕೃಷ್ಣ ಸಂಧಾನ’ ಪೌರಾಣಿಕ ನಾಟಕ ಪ್ರದರ್ಶಿಸಲಿದ್ದಾರೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !