ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸೌಧ ಆವರಣದಲ್ಲಿ 26ಕ್ಕೆ ಕೆಂಪೇಗೌಡ, ಬಸವಣ್ಣ ಪ್ರತಿಮೆ ಅನಾವರಣ: ಆರ್‌. ಅಶೋಕ

ಬೆಂಗಳೂರು ಹಬ್ಬದ ಅಂಗವಾಗಿ ವಿಶೇಷ ಕಾರ್ಯಕ್ರಮ
Last Updated 20 ಮಾರ್ಚ್ 2023, 20:32 IST
ಅಕ್ಷರ ಗಾತ್ರ

ಬೆಂಗಳೂರು: ಮಾರ್ಚ್‌ 25ರಿಂದ ಎರಡು ದಿನಗಳ ಕಾಲ ಬೆಂಗಳೂರು ಹಬ್ಬ ಆಯೋಜಿಸಲಾಗಿದೆ. ವಿಧಾನಸೌಧದ ಆವರಣದಲ್ಲಿ ಸ್ಥಾಪಿಸಿರುವ ನಾಡಪ್ರಭು ಕೆಂಪೇಗೌಡ ಮತ್ತು ಬಸವಣ್ಣ ಪ್ರತಿಮೆಗಳನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾರ್ಚ್‌ 26ರಂದು ಅನಾವರಣಗೊಳಿಸುವರು ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ವಿಧಾನಸೌಧದಲ್ಲಿ ಸೋಮವಾರ ‘ಬೆಂಗಳೂರು ಹಬ್ಬ’ದ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ‘ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ಶನಿವಾರ ಸಂಜೆ ಬೆಂಗಳೂರು ಹಬ್ಬದ ಉದ್ಘಾಟನಾ ಸಮಾರಂಭ ನಡೆಯಲಿದೆ. ನಂತರ ಗಾಯಕರಾದ ಅನನ್ಯಾ ಭಟ್‌, ನವೀನ್‌ ಸಜ್ಜು, ಜನಾರ್ದನ್‌ ಮತ್ತು ತಂಡದವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ’ ಎಂದರು.

ಎರಡು ದಿನಗಳ ಕಾಲ ಕಬ್ಬನ್‌ ಉದ್ಯಾನದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗುವುದು. ಕರ್ನಾಟಕ ಚಿತ್ರಕಲಾ ಪರಿಷತ್‌ ಮತ್ತು ಕರ್ನಾಟಕ ಲಲಿತ ಕಲಾ ಅಕಾಡೆಮಿ ಸಹಯೋಗದಲ್ಲಿ ಚಿತ್ರಸಂತೆ ಮಾದರಿಯಲ್ಲಿ ಕಲಾಕೃತಿಗಳ ಪ್ರದರ್ಶನ ನಡೆಯಲಿದೆ. ಕರಕುಶಲ ಮೇಳವನ್ನೂ ಆಯೋಜಿಸಲಾಗುವುದು ಎಂದು ತಿಳಿಸಿದರು.

ವಿವಿಧ ಅಕಾಡೆಮಿಗಳು, ರಂಗ ಶಂಕರ ಮತ್ತು ನೀನಾಸಂ ಸಂಸ್ಥೆಗಳ ಸಹಯೋಗದಲ್ಲಿ ಬಾಲಭವನದ ಆವರಣದಲ್ಲಿ ನಾಟಕ, ಬೀದಿ ನಾಟಕ, ಗೊಂಬೆಯಾಟ, ಯಕ್ಷಗಾನ, ಗಾಯನ ಮತ್ತು ನೃತ್ಯ ಕಾರ್ಯಕ್ರಮಗಳು ನಡೆಯಲಿವೆ. ಕಬ್ಬನ್‌ ಉದ್ಯಾನದ ಬ್ಯಾಂಡ್‌ ಸ್ಟ್ಯಾಂಡ್‌ನಲ್ಲಿ ಪೊಲೀಸ್‌ ಬ್ಯಾಂಡ್‌ ವಾದನ, ನೃತ್ಯ, ಜನಪದ ಗಾಯನ, ನಾಟಕ ಮತ್ತಿತರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ಮಕ್ಕಳ ಚಿತ್ರೋತ್ಸವ: ಬಾಲಭವನದ ಸಭಾಂಗಣದಲ್ಲಿ ಶುಕ್ರವಾರದಿಂದ ಭಾನುವಾರದವರೆಗೆ ಮಕ್ಕಳ ಚಿತ್ರೋತ್ಸವ ನಡೆಯಲಿದೆ. ಪ್ರತಿದಿನ ಮೂರು ಪ್ರದರ್ಶನಗಳು ನಡೆಯಲಿವೆ. ಶನಿವಾರ ಮತ್ತು ಭಾನುವಾರ ನಗರ ಆಯ್ದ ಚಿತ್ರಮಂದಿರಗಳಲ್ಲಿ ಬೆಳಗಿನ ಪ್ರದರ್ಶನಗಳಲ್ಲಿ ಹಳೆಯ ಕನ್ನಡ ಸಿನಿಮಾಗಳನ್ನು ಉಚಿತವಾಗಿ ಪ್ರದರ್ಶಿಸಲಾಗುವುದು ಎಂದು ಅಶೋಕ ತಿಳಿಸಿದರು.

ಬೆಂಗಳೂರು ಹಬ್ಬದ ಅಂಗವಾಗಿ ಕಬ್ಬನ್‌ ಉದ್ಯಾನದಲ್ಲಿ ಪುಸ್ತಕ ಮೇಳ ಮತ್ತು ಆಹಾರ ಮೇಳವನ್ನೂ ಆಯೋಜಿಸಲಾಗಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT