ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Bandh: ವಿಮಾನ ಹಾರಾಟಕ್ಕೂ ತಟ್ಟಿದ ಬಂದ್‌ ಬಿಸಿ, 44 ವಿಮಾನಗಳ ರದ್ದು

Published 29 ಸೆಪ್ಟೆಂಬರ್ 2023, 6:30 IST
Last Updated 29 ಸೆಪ್ಟೆಂಬರ್ 2023, 6:30 IST
ಅಕ್ಷರ ಗಾತ್ರ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಕರ್ನಾಟಕ ಬಂದ್‌ಗೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಂದ್‌ ಹಿನ್ನೆಲೆಯಲ್ಲಿ ಇಂದು 22 ಆಗಮನ ಮತ್ತು 22 ನಿರ್ಗಮನ ಸೇರಿದಂತೆ 44 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು, ರಾಮನಗರ, ಮೈಸೂರು, ಮಂಡ್ಯ, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕನ್ನಡಪರ ಸಂಘಟನೆಗಳು, ಬಿಜೆಪಿ– ಜೆಡಿಎಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಹಲವೆಡೆ ರಸ್ತೆ ತಡೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT