ಬುಧವಾರ, ಮೇ 18, 2022
27 °C
ಕೋವಿಡ್‌ ಬಳಿಕ ಶೇ 90ರಷ್ಟು ವಿಮಾನಗಳ ಹಾರಾಟ ಪುನರಾರಂಭ

ಬೆಂಗಳೂರು: ಅಂತರರಾಷ್ಟ್ರೀಯ ತಾಣಗಳಿಗೆ ವಿಮಾನ ಸಂಪರ್ಕ ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಪ್ರತಿ ದಿನ ಈಗ 25 ಅಂತರರಾಷ್ಟ್ರೀಯ ವಿಮಾನಗಳು ಹಾರಾಟ ನಡೆಸುತ್ತಿವೆ. ಇದರಿಂದಾಗಿ ಕೋವಿಡ್‌ ಪೂರ್ವ ಕಾಲಕ್ಕೆ ಹೋಲಿಸಿದರೆ ಈಗ ಶೇ 90ರಷ್ಟು ವಿಮಾನಗಳ ಹಾರಾಟ ಪುನರಾರಂಭವಾದಂತಾಗಿದೆ.

ಅಂತರರಾಷ್ಟ್ರಿಯ ಮಾರ್ಗಗಳಲ್ಲಿ ವಿಮಾನಗಳ ಹಾರಾಟ ಆರಂಭವಾಗಿರುವುದರಿಂದ ಬೆಂಗಳೂರು ವಿಮಾನ ನಿಲ್ದಾಣದ ಮಾರ್ಗದಲ್ಲೂ ದಟ್ಟಣೆ ಹೆಚ್ಚಾಗುತ್ತಿದೆ. 

ಪ್ರಸ್ತುತ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು 17 ದೇಶಗಳಲ್ಲಿನ 21 ಸ್ಥಳಗಳ ಜತೆ ಸಂಪರ್ಕ ಹೊಂದಿದ್ದು, 24 ವಿಮಾನಯಾನ ಸಂಸ್ಥೆಗಳು ಕಾರ್ಯಾಚರಣೆ ನಡೆಸುತ್ತಿವೆ. ಈ ವರ್ಷದ ಅಂತ್ಯದ ಒಳಗೆ ಹಲವು ಹೊಸ ಮಾರ್ಗಗಳಿಗೂ ಸಂಪರ್ಕ ಕಲ್ಪಿಸಲಿದೆ.

ವಿಮಾನ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿರುವುದರಿಂದ ಮತ್ತಷ್ಟು ಸೌಲಭ್ಯಗಳನ್ನು ಕಲ್ಪಿಸಲು ಕ್ರಮಕೈಗೊಳ್ಳಲಾಗುತ್ತಿದೆ. ವಿವಿಧ ಪ್ರವೇಶ ದ್ವಾರಗಳು ಮತ್ತು ತಪಾಸಣಾ ಸ್ಥಳಗಳಲ್ಲಿ ಅತ್ಯಾಧುನಿಕ ಸ್ವಯಂಚಾಲಿತ ತಂತ್ರಜ್ಞಾನವನ್ನು ಅಳವಡಿಸಲಾಗುತ್ತಿದೆ ಎಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ (ಬಿಐಎಎಲ್‌) ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿ ಮರಾರ್‌ ತಿಳಿಸಿದ್ದಾರೆ.

ದೇಶಿಯವಾಗಿಯೂ ಪ್ರಯಾಣಿಕರ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ದಕ್ಷಿಣ ಭಾರತದಲ್ಲೇ ಅತಿ ದೊಡ್ಡ ಸಂಪರ್ಕ ಜಾಲದ ತಾಣವಾಗಿ ಬೆಂಗಳೂರು ವಿಮಾನ ನಿಲ್ದಾಣ ಹೊರಹೊಮ್ಮಿದೆ. ದೇಶದ 74 ಸ್ಥಳಗಳಿಗೆ ಇಲ್ಲಿಂದ ಸಂಪರ್ಕ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

‘ವಿಂಗ್ಸ್‌ ಇಂಡಿಯಾ–2022’ ಕಾರ್ಯಕ್ರಮದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಇತ್ತೀಚೆಗೆ ‘ಅತ್ಯುತ್ತಮ ವಿಮಾನ ನಿಲ್ದಾಣ’ ಮತ್ತು ‘ವೈಮಾನಿಕ ಆವಿಷ್ಕಾರ’ ಪ್ರಶಸ್ತಿಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು