ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

27ಕ್ಕೆ ಅದ್ದೂರಿ ಕೆಂಪೇಗೌಡ ಜಯಂತಿ: ರಾಜ್ಯ ಒಕ್ಕಲಿಗರ ಸಂಘ

Published 25 ಜೂನ್ 2023, 16:03 IST
Last Updated 25 ಜೂನ್ 2023, 16:03 IST
ಅಕ್ಷರ ಗಾತ್ರ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಜೂನ್‌ 27ರಂದು ಸಾಂಸ್ಕೃತಿಕ ಉತ್ಸವದೊಂದಿಗೆ ವೈಭವಯುತವಾಗಿ ಆಚರಿಸಲು ರಾಜ್ಯ ಒಕ್ಕಲಿಗರ ಸಂಘ ನಿರ್ಧರಿಸಿದೆ.

ಅಂದು ಸಂಘದ ಆವರಣದಿಂದ ವಿಧಾನಸೌಧದವರೆಗೆ ಜಾನಪದ ಕಲಾತಂಡಗಳ ಮೆರವಣಿಗೆ ವೈಶಿಷ್ಟ್ಯಪೂರ್ಣವಾಗಿ ನಡೆಯಲಿದೆ. ಬಳಿಕ ವಿಧಾನಸೌಧದಲ್ಲಿ ಮಧ್ಯಾಹ್ನ 12ಕ್ಕೆ ಜಯಂತಿ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ.ಕೆಂಚಪ್ಪಗೌಡ ಮನವಿ ಮಾಡಿದ್ದಾರೆ.

ಆ ದಿನದಂದು ಸಂಘದ ಎಲ್ಲ ಶಾಲಾ - ಕಾಲೇಜುಗಳಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಪೂಜೆ ಸಲ್ಲಿಸಲು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕೆಂಪೇಗೌಡ ಆಸ್ಪತ್ರೆಯ ಆವರಣದಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಅಂದು ಬೆಳಿಗ್ಗೆ 9ಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ ಪಾಲ್ಗೊಳ್ಳಲಿದ್ದಾರೆ. ಮೆರವಣಿಗೆಯಲ್ಲಿ ಡೊಳ್ಳುಕುಣಿತ, ಪೂಜಾಕುಣಿತ, ವೀರಗಾಸೆ, ಹುಲಿವೇಷ, ಚಿಲಿಪಿಲಿಗೊಂಬೆ, ಪಟಕುಣಿತ ಆಕರ್ಷಣೆ ಆಗಿರಲಿವೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT