ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆಗೆ ಸಿದ್ಧತೆ: ಮುಖ್ಯಮಂತ್ರಿ ಬೊಮ್ಮಾಯಿ ಪರಿಶೀಲನೆ

Last Updated 10 ನವೆಂಬರ್ 2022, 20:44 IST
ಅಕ್ಷರ ಗಾತ್ರ

ಬೆಂಗಳೂರು: ‘ನಾಡಪ್ರಭು ಹೆಸರಿನಲ್ಲಿರುವ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಪ್ರಗತಿ ಪ್ರತಿಮೆಯನ್ನು ಅಭಿವೃದ್ಧಿಗೆ ಪ್ರೇರಣೆಯಾಗುವ ದೃಷ್ಟಿಯಿಂದ ನಿರ್ಮಿಸಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದರು.

ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಭಾ ವೇದಿಕೆ ಕಾರ್ಯಕ್ರಮದ ಸಿದ್ಧತೆಗಳನ್ನು ಗುರುವಾರ ಪರಿಶೀಲಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಕೆಂಪೇಗೌಡರ ಪ್ರಗತಿ ಪ್ರತಿಮೆಯನ್ನು ರಾಮ್ ಸುತಾರಾ ನಿರ್ಮಿಸಿದ್ದಾರೆ. ಇಡೀ ಭಾರತದಲ್ಲಿಯೇ ಅವರು ಅತ್ಯಂತ ಶ್ರೇಷ್ಠ ಶಿಲ್ಪಿ. ಅಹಮದಾಬಾದ್‍ನಲ್ಲಿರುವ ವಲ್ಲಭಭಾಯಿ ಪಟೇಲ್ ಅವರ ಏಕತಾ ಮೂರ್ತಿ ಹಾಗೂ ಅಂಬೇಡ್ಕರ್ ಅವರ ಅತಿ ಎತ್ತರದ ಮೂರ್ತಿ ನಿರ್ಮಿಸಿದ ಖ್ಯಾತಿ ಅವರದ್ದಾಗಿದೆ. ಪ್ರಧಾನಮಂತ್ರಿ ಅವರು ಸುತಾರಾ ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಅವರ ಕೈಚಳಕದಿಂದ ಇಷ್ಟು ಬೃಹತ್ ಮೂರ್ತಿ ಮೈದಳೆದಿದೆ. ಸಮಸ್ತ ಕನ್ನಡ ನಾಡಿನ ಜನತೆಯ ಪರವಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ’ ಎಂದು ಹೇಳಿದರು.

‘ಕನಕ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ಆಗಮಿಸುತ್ತಿರುವುದು ಯೋಗಾಯೋಗ. ಒಬ್ಬ ಹಿಂದುಳಿದ ವರ್ಗಕ್ಕೆ ಸೇರಿದ ಪ್ರಧಾನಮಂತ್ರಿ ಅವರು ಸಮಸ್ತ ಮಾನವಕುಲಕ್ಕೆ ದಾರಿದೀಪವಾಗಿರುವ ಕನಕದಾಸರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಜತೆಗೆ, ಪಕ್ಕದಲ್ಲಿಯೇ ಇರುವ ವಾಲ್ಮೀಕಿ ಮೂರ್ತಿಗೂ ಪುಷ್ಪಾರ್ಚನೆ ಮಾಡಲಿದ್ದಾರೆ’ ಎಂದರು.

‘ಗುಂಡಿಗಳನ್ನು ಶೀಘ್ರ ಮುಚ್ಚಲಾಗುವುದು’
‘ಗುಂಡಿಗಳನ್ನು ಮುಚ್ಚುವ ಕಾರ್ಯ ನಿರಂತರವಾಗಿ ನಡೆಯುವ ಪ್ರಕ್ರಿಯೆ. 3-4 ದಿನಗಳಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಲಾಗುವುದು’ ಎಂದು ಬೊಮ್ಮಾಯಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT