ಬೆಂಗಳೂರು: ದೇವನಹಳ್ಳಿ ಬಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪನೆ ಆಗಲಿರುವ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯ ಭಾಗವಾದ 4 ಸಾವಿರ ಕಿಲೋ ತೂಕದ ಖಡ್ಗವು ದೆಹಲಿಯಿಂದ ಸೋಮವಾರ ಬೆಂಗಳೂರು ತಲುಪಿದೆ.

ವಿಶೇಷ ಟ್ರಕ್‌ನಲ್ಲಿ ಬಂದ ಈ ಖಡ್ಗವನ್ನು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಖಡ್ಗಕ್ಕೆ ಸಾಂಪ್ರದಾಯಿಕ ಶಕ್ತಿಪೂಜೆ ನೆರವೇರಿಸಲಾಯಿತು. ‘ಕೆಂಪೇಗೌಡರ ಸ್ಮರಣಾರ್ಥ ಕೆಐಎನಲ್ಲಿ 23 ಎಕರೆ ಜಾಗದಲ್ಲಿ ಪಾರಂಪರಿಕ ಪಾರ್ಕ್ ಅಸ್ತಿತ್ವಕ್ಕೆ ಬರಲಿದ್ದು, ಕಾಮಗಾರಿ ಭರದಿಂದ ಸಾಗುತ್ತಿವೆ. ಇಲ್ಲಿ ತಲೆಯೆತ್ತಲಿರುವ ಕೆಂಪೇಗೌಡರ ಪ್ರತಿಮೆಗೆ ₹ 85 ಕೋಟಿ ವಿನಿಯೋಗಿಸಲಾಗುತ್ತಿದೆ. ನೋಯಿಡಾದ ಶಿಲ್ಪಿ ರಾಮ್ ವಾನಜಿ ಸುತರ್ ಈ ಪ್ರತಿಮೆ ಮಾಡಿಕೊಡುತ್ತಿದ್ದಾರೆ’ ಎಂದು ಅಶ್ವತ್ಥನಾರಾಯಣ ತಿಳಿಸಿದರು.

‘ಕೆಂಪೇಗೌಡರು ಕೈಯಲ್ಲಿ ಹಿಡಿದಿರುವ ಕತ್ತಿಯು (ಖಡ್ಗ) ಕ್ಷಾತ್ರಬಲವನ್ನು ಪ್ರತಿನಿಧಿಸುತ್ತಿದ್ದು, ನವಭಾರತಕ್ಕೊಂದು ಸಂಕೇತವಾಗಿದೆ. ವಿಮಾನ ನಿಲ್ದಾಣದ ಮೂಲಕ ಹೋಗುವವರು ಮತ್ತು ಇಲ್ಲಿ ಬಂದಿಳಿಯುವವರಿಗೆ ಈ ಪ್ರತಿಮೆಯ ನೋಟ ಒಂದು ದಿವ್ಯ ಅನುಭೂತಿ ಮೂಡಿಸುವಂತಿರಬೇಕು ಎನ್ನುವುದು ಸರ್ಕಾರದ ಉದ್ದೇಶ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.