ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾತ್ಯತೀತ ನಿಲುವಿನ ಕೆಂಪೇಗೌಡ: ಎಂ. ತಿಬ್ಬೇಗೌಡ

Published 29 ಜೂನ್ 2023, 19:42 IST
Last Updated 29 ಜೂನ್ 2023, 19:42 IST
ಅಕ್ಷರ ಗಾತ್ರ

ರಾಜರಾಜೇಶ್ವರಿನಗರ: ಧಾರ್ಮಿಕ, ಪರಂಪರೆ, ಸಂಸ್ಕೃತಿ ಮತ್ತು ಜಾತ್ಯತೀತ ನಿಲುವಿನಿಂದ ಬೆಂಗಳೂರು ನಗರವನ್ನು ಕಟ್ಟಿದ ನಾಡಪ್ರಭು ಕೆಂಪೇಗೌಡರನ್ನು ಒಂದು ಜಾತಿ ಧರ್ಮಕ್ಕೆ ಸೀಮಿತಗೊಳಿಸಬಾರದು ಎಂದು ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ. ತಿಬ್ಬೇಗೌಡ ಹೇಳಿದರು.

ಜವರೇಗೌಡನ ದೊಡ್ಡಿಯಲ್ಲಿ ನಡೆದ ಕೆಂಪೇಗೌಡರ 514ನೇ ಜಯಂತಿ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ರಾಜ್‍ಕುಮಾರ್ ಮಾತನಾಡಿ, ‘ನಾಡಪ್ರಭು ಕೆಂಪೇಗೌಡ ಅವರಲ್ಲಿ ದೂರದೃಷ್ಟಿ ಇತ್ತು. ಬೆಂಗಳೂರು ಕಟ್ಟುವ ಮೂಲಕ ಎಲ್ಲ ವರ್ಗ, ಜಾತಿ, ಭಾಷೆಯ ಜನರು ಉದ್ಯೋಗ ಕಂಡುಕೊಳ್ಳುವಂತೆ ಮಾಡಿದರು. ಪೇಟೆ, ಕೋಟೆ, ಕೆರೆ-ಕುಂಟೆ, ಕಲ್ಯಾಣಿ, ಗುಂಡು ತೋಪು, ಮನೆಗಳನ್ನು ಕಟ್ಟಿಕೊಟ್ಟಿದ್ದರು’ ಎಂದು ಸ್ಮರಿಸಿದರು.

ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಪುಟ್ಟಸ್ವಾಮಿಗೌಡ, ರಾಜರಾಜೇಶ್ವರಿನಗರ ಬ್ಲಾಕ್ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷ ಕೆಂಪರಾಜು, ಮರಿಗೌಡ, ಶಿಕ್ಷಣ ಪ್ರೇಮಿ ಎಚ್. ತುಕಾರಾಂ, ಆನಂದ್, ನವೀನ್, ರವಿ, ಪರಮೇಶ್ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT