ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯಡಿಯೂರಪ್ಪಗೆ ‘ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ’

Published 8 ಜೂನ್ 2024, 16:01 IST
Last Updated 8 ಜೂನ್ 2024, 16:01 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಕೆಂಗಲ್ ಹನುಮಂತಯ್ಯ ದತ್ತಿ ಪ್ರಶಸ್ತಿ’ಗೆ ಬಿಜೆಪಿಯ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹ 25 ಸಾವಿರ ನಗದು ಒಳಗೊಂಡಿದೆ. ನಾಡಿನ ಸಂಸ್ಕೃತಿ, ಸಾಹಿತ್ಯ, ಕಲೆ, ಪರಂಪರೆಯ ಪೋಷಕರು ಅಥವಾ ಈ ಕ್ಷೇತ್ರಗಳಲ್ಲಿ ಕನಿಷ್ಠ 25 ವರ್ಷಗಳು ಸೇವೆ ಸಲ್ಲಿಸಿದವರನ್ನು ಆಯ್ಕೆ ಮಾಡುವುದು ಈ ದತ್ತಿಯ ಆಶಯವಾಗಿದೆ. 

ಮುಖ್ಯಮಂತ್ರಿಯಾಗಿ, ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿರುವ ಯಡಿಯೂರಪ್ಪ, ಕನ್ನಡ ಮತ್ತು ಸಂಸ್ಕೃತಿಗೆ ನಿರಂತರ ಕೊಡುಗೆ ನೀಡಿದ್ದಾರೆ. ಅವರಿಗಿರುವ ಕನ್ನಡದ ಬಗೆಗಿನ ಕಾಳಜಿ ಮತ್ತು ಸಾಂಸ್ಕೃತಿಕ ಕೊಡುಗೆಯನ್ನು ಗಮನಿಸಿ ಈ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT