ಸೋಮವಾರ, ಮಾರ್ಚ್ 27, 2023
29 °C

ಮನೆ ಮುಂದೆ ನಿಲ್ಲಿಸುತ್ತಿದ್ದ ಬೈಕ್‌ಗಳ ಕಳ್ಳತನ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಮನೆ ಮುಂದೆ ನಿಲ್ಲಿಸಿರುತ್ತಿದ್ದ ಬೈಕ್‌ಗಳನ್ನು ಕದ್ದು ಬೇರೆಡೆ ಮಾರಾಟ ಮಾಡುತ್ತಿದ್ದ ನದೀಂ ಅಹ್ಮದ್‌ ಎಂಬಾತನನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಆತನಿಂದ ₹5.20 ಲಕ್ಷ ಮೌಲ್ಯದ ನಾಲ್ಕು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.

‘ತಮ್ಮ ಮನೆಯ ಮುಂದೆ ನಿಲ್ಲಿಸಿದ್ದ ಹೋಂಡಾ ಆ್ಯಕ್ಟಿವಾ ಸ್ಕೂಟರ್‌ ಕಳವಾಗಿರುವ ಬಗ್ಗೆ ವ್ಯಕ್ತಿಯೊಬ್ಬರು ಠಾಣೆಗೆ ದೂರು ನೀಡಿದ್ದರು. ಠಾಣಾ ವ್ಯಾಪ್ತಿಯಲ್ಲಿ ನದೀಂ ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಗಸ್ತಿನಲ್ಲಿದ್ದ ಸಿಬ್ಬಂದಿ ಗಮನಿಸಿದ್ದರು. ಅಕ್ಟೋಬರ್‌ 31ರಂದು ಆತನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ ತಾನೆ ಬೈಕ್‌ ಕಳ್ಳತನ ಮಾಡಿದ್ದಾಗಿ ಒಪ್ಪಿಕೊಂಡಿದ್ದ’ ಎಂದು ಪೊಲೀಸರು ತಿಳಿಸಿದ್ದಾರೆ.

‘ದರೋಡೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ಒಂದೂವರೆ ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ. ಬಳಿಕ ಬೈಕ್‌ ಕಳ್ಳತನಕ್ಕೆ ಮುಂದಾಗಿದ್ದ. ಕದ್ದ ಬೈಕ್‌ಗಳನ್ನು ಮಾರಾಟ ಮಾಡಿ ಹಣ ಸಂಪಾದನೆ ಮಾಡುತ್ತಿದ್ದ. ಕೆಂಗೇರಿಯಲ್ಲಿ ಎರಡು, ಬ್ಯಾಡರಹಳ್ಳಿ ಹಾಗೂ ಜಿಗಣಿ ಠಾಣೆಗಳ ವ್ಯಾಪ್ತಿಯಲ್ಲಿ ತಲಾ ಒಂದು ಬೈಕ್‌ ಕದ್ದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.