ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಗೇರಿಯವರೆಗೆ ಮೆಟ್ರೊ ರೈಲು ಸೇವೆ ಜೂನ್‌ನಿಂದ ಆರಂಭ

Last Updated 20 ಮೇ 2021, 8:54 IST
ಅಕ್ಷರ ಗಾತ್ರ

ಬೆಂಗಳೂರು:'ನಮ್ಮ ಮೆಟ್ರೊ'ದ ಮೈಸೂರು ರಸ್ತೆ ವಿಸ್ತರಿತ ಮಾರ್ಗವಾದ ಕೆಂಗೇರಿಯವರೆಗೆ ಜೂನ್ ನಿಂದ ವಾಣಿಜ್ಯ ಸಂಚಾರ ಆರಂಭವಾಗಲಿದೆ.

7.53 ಕಿ.ಮೀ. ಉದ್ದದ ಈ ವಿಸ್ತರಿತ ಮಾರ್ಗದಲ್ಲಿ ಜೂನ್ ನಲ್ಲಿ ಮೆಟ್ರೊ ರೈಲು ಸಂಚಾರ ಆರಂಭಿಸಲು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ ಸಿಎಲ್) ಸಜ್ಜಾಗಿದೆ‌.

ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಜ್ಞಾನಭಾರತಿ, ಪಟ್ಟಣಗೆರೆ, ಕೆಂಗೇರಿ ಬಸ್ ನಿಲ್ದಾಣ ಮತ್ತು ಕೆಂಗೇರಿಯಲ್ಲಿ ಮೆಟ್ರೊ ನಿಲ್ದಾಣಗಳು ನಿರ್ಮಾಣವಾಗಿವೆ.

ಸಿವಿಲ್‌ ಕಾಮಗಾರಿ‌ ಮುಗಿದಿದ್ದು, ನಿಲ್ದಾಣಗಳಿಗೆ ಅಂತಿಮ ಸ್ಪರ್ಶ ನೀಡಲಾಗುತ್ತಿದೆ‌. ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಜ್ಞಾನಭಾರತಿ ಹಾಗೂ ಕೆಂಗೇರಿ ಬಸ್ ನಿಲ್ದಾಣದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಈ ವಿಸ್ತರಿತ ಮಾರ್ಗದಲ್ಲಿ ದಿನಕ್ಕೆ 75 ಸಾವಿರ ಪ್ರಯಾಣಿಕರು ಪ್ರಯಾಣಿಸುವ ನಿರೀಕ್ಷೆ ಇದೆ ಎಂದು ನಿಗಮ ಹೇಳಿದೆ.
ಏ.3ರಿಂದ ಈ ಮಾರ್ಗದಲ್ಲಿ ಪರೀಕ್ಷಾರ್ಥ ಸಂಚಾರ ಆರಂಭಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT