ಶನಿವಾರ, ಫೆಬ್ರವರಿ 22, 2020
19 °C

ಕೆಂಗೇರಿ ಉಪನಗರದಲ್ಲಿ ಜಲ ಮಂಡಳಿ ವಿಭಾಗ: ಸೋಮಶೇಖರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆಂಗೇರಿ: ಕೆಂಗೇರಿ ಉಪನಗರದಲ್ಲಿ ಜಲಮಂಡಳಿಯ ಸೇವಾ ಕೇಂದ್ರದ ಜೊತೆಗೆ ಉಪವಿಭಾಗವನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

ಕೆಂಗೇರಿ ಉಪನಗರದ ಬ್ರಾಹ್ಮಣ ಸಭಾದ ಗಾಯತ್ರಿ ಮಂದಿರದಲ್ಲಿ ಭಾನುವಾರ ನಡೆದ ಎಸ್ಸೆಸ್ಸೆಲ್ಸಿ ಪುನರ್ಮನನ ತರಗತಿ ಸಮಾರೋಪ ಸಮಾರಂಭ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗಾಯಿತ್ರಿ ಮಂದಿರದ ಎರಡನೇ ಮಹಡಿಯಲ್ಲಿ ವಿದ್ಯಾರ್ಥಿ ನಿಲಯ ಸ್ಥಾಪನೆಗೆ ಶಾಸಕರ ಅನುದಾನದಲ್ಲಿ ₹25 ಲಕ್ಷ  ಬಿಡು ಗಡೆ ಮಾಡಲಾಗುವುದು ಎಂದರು.

ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್‌, ‘ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ತೋರಲು ಅಕಾಡೆಮಿ ಮತ್ತು ತಾವು ವೈಯಕ್ತಿಕವಾಗಿ ಸಿದ್ಧ’ ಎಂದರು.

ಸರ್.ಎಂ. ವಿಶ್ವೇಶ್ವರಯ್ಯ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಕೆ. ಎನ್. ವೆಂಕಟನಾರಾಯಣ, ನ್ಯಾಷನಲ್ ಕೋ ಆಪರೇಟಿವ್‌ ಬ್ಯಾಂಕ್ ಅಧ್ಯಕ್ಷ ಎಚ್.ಸಿ. ಕೃಷ್ಣ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)