ಬೆಂಗಳೂರು: ಸಾರ್ವಜನಿಕ ಸ್ಥಳ ಹಾಗೂ ಮನೆಗಳ ಎದುರು ನಿಲುಗಡೆ ಮಾಡಿರುತ್ತಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡಿ ಪರಾರಿಯಾಗುತ್ತಿದ್ದ ಆರೋಪಿಯನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ರಾಜಾಜಿನಗರದ ವಿಜಯ್ (27) ಬಂಧಿತ. ಈತನಿಂದ ತಲಾ ಎರಡು ಬೈಕ್ ಹಾಗೂ ಸ್ಕೂಟರ್ ಜಪ್ತಿ ಮಾಡಲಾಗಿದೆ. ಇವುಗಳ ಒಟ್ಟು ಮೌಲ್ಯ ₹1.2 ಲಕ್ಷ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಇದೇ 21ರ ಸಂಜೆ 4 ಗಂಟೆ ಸುಮಾರಿಗೆ ವ್ಯಕ್ತಿಯೊಬ್ಬರು ಮೆಟ್ರೊ ನಿಲ್ದಾಣದ ವಾಹನ ನಿಲುಗಡೆ ಸ್ಥಳದಲ್ಲಿ ಬೈಕ್ ನಿಲ್ಲಿಸಿ ಹೋಗಿದ್ದರು. ಅದು ಕಳವಾಗಿತ್ತು. ಸಂಬಂಧ ದಾಖಲಾಗಿದ್ದ ದೂರಿನ ಆಧಾರದಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದೇವೆ’ ಎಂದು ಹೇಳಿದ್ದಾರೆ.

‘ಆರೋಪಿಯು ಠಾಣೆ ವ್ಯಾಪ್ತಿಯಲ್ಲಿ ಮೂರು ಹಾಗೂ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದು ದ್ವಿಚಕ್ರ ವಾಹನ ಕಳವು ಮಾಡಿದ್ದಾನೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.