ಮಂಗಳವಾರ, ಜನವರಿ 18, 2022
15 °C

ಜ.17ಕ್ಕೆ ಕೆಎಫ್‌ಸಿಎಸ್‌ಸಿ ಕಾರ್ಮಿಕರ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ (ಕೆಎಫ್‌ಸಿಎಸ್‌ಸಿ) ಗೋದಾಮುಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಗುರುತಿನ ಚೀಟಿ, ರಜೆ ಸೇರಿದಂತೆ ವಿವಿಧ ಸವಲತ್ತುಗಳಿಗೆ ಆಗ್ರಹಿಸಿ ಕೆಎಫ್‌ಸಿಎಸ್‌ಸಿ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಕಾರ್ಮಿಕರ ಒಕ್ಕೂಟವು ಇದೇ 17ರಂದು ರಾಜ್ಯದ ಎಲ್ಲ ಗೋದಾಮುಗಳ ಎದುರು ಪ್ರತಿಭಟನೆ ಹಮ್ಮಿಕೊಂಡಿದೆ.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಜಿ.ಆರ್.ಶಿವಶಂಕರ್,‘ರಾಜ್ಯದಲ್ಲಿರುವ ಕೆಎಫ್‌ಸಿಎಸ್‌ಸಿ 191 ಗೋದಾಮುಗಳಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆದರೆ, ಕಾರ್ಮಿಕರಿಗೆ ಸಿಗಬೇಕಿರುವ ಕನಿಷ್ಠ ಸವಲತ್ತುಗಳನ್ನು ಈವರೆಗೆ ನೀಡಿಲ್ಲ’ ಎಂದು ದೂರಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು