ಶನಿವಾರ, ಅಕ್ಟೋಬರ್ 24, 2020
18 °C

ಕಾಫಿ ಮಂಡಳಿಯ ಕಾರ್ಯದರ್ಶಿಯಾಗಿ ಕೆ.ಜಿ.ಜಗದೀಶ್ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಕೆ.ಜಿ. ಜಗದೀಶ್ ಅವರನ್ನು ಕೇಂದ್ರ ಸರ್ಕಾರದ ವಾಣಿಜ್ಯ ಇಲಾಖೆಯ ಅಡಿಯಲ್ಲಿರುವ ಕಾಫಿ ಮಂಡಳಿಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.

ಈ ನೇಮಕಾತಿಗೆ ಸಕ್ಷಮ ಪ್ರಾಧಿಕಾರ ಸಹಮತಿ ಸೂಚಿಸಿದ್ದು, ಜಗದೀಶ್ ಅವರನ್ನು ಪ್ರಸಕ್ತ ಹುದ್ದೆಯಿಂದ ಬಿಡುಗಡೆ ಮಾಡುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಸೂಚಿಸಿದೆ.
ಅವರ ನೇಮಕಾತಿ ಅವಧಿಯು, ಅಧಿಕಾರ ಸ್ವೀಕರಿಸಿದ ದಿನದಿಂದ ಐದು ವರ್ಷ ಇರಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.