ಕಾಂಗ್ರೆಸ್‌ನಿಂದ ಕೆಜಿಎಫ್ ಬಾಬು ಅಮಾನತು

ಬೆಂಗಳೂರು: ಉದ್ಯಮಿ ಯೂಸುಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು ಅವರನ್ನು ಪಕ್ಷದಿಂದ ಅಮಾನತುಗೊಳಿಸಿ ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ಕೆ. ರೆಹಮಾನ್ ಖಾನ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಪಕ್ಷದ ವಿರುದ್ಧ ಹೇಳಿಕೆ ನೀಡುತ್ತಿರುವುದು ಹಾಗೂ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗುತ್ತಿರುವ ಆರೋಪದ ಮೇಲೆ ಬಾಬು ಅವರಿಗೆ ಮೂರು ತಿಂಗಳ ಹಿಂದೆ ಶಿಸ್ತು ಸಮಿತಿ ನೋಟಿಸ್ ನೀಡಿತ್ತು. ಶುಕ್ರವಾರ ಕೂಡ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ್ದ ಬಾಬು, ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಆ ಬಳಿಕ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.