ಬೆಂಗಳೂರು: ಸಾಮಾನ್ಯ ಹಳ್ಳಿಯಲ್ಲಿ ಹುಟ್ಟಿ ಸಹಕಾರಿ ಧುರೀಣರಾಗಿ ಬೆಳೆದ ಕೆ.ಎಚ್. ಪಾಟೀಲರು ಅಪರೂಪದ ರಾಜಕಾರಣಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೆ.ಎಚ್. ಪಾಟೀಲರ 101ನೇ ಜಯಂತ್ಯುತ್ಸವ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಹುಲಕೋಟಿಯಂಥ ಗ್ರಾಮದಲ್ಲಿ ಹುಟ್ಟಿ ಪಂಚಾಯಿತಿ ಸದಸ್ಯರಾಗಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಕೆ.ಎಚ್. ಪಾಟೀಲ ಅವರು ಸಹಕಾರಿ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಆಡು ಮುಟ್ಟದ ಸೊಪ್ಪಿಲ್ಲ ಎಂಬ ಗಾದೆ ಮಾತಿನಂತೆ ಸಹಕಾರಿ ಕ್ಷೇತ್ರದಲ್ಲಿ ಇವರು ಮಾಡದಿರುವ ಕೆಲಸವಿಲ್ಲ ಎಂದು ಬಣ್ಣಿಸಿದರು.

ಸಹಕಾರಿ ಕ್ಷೇತ್ರ ಮಾತ್ರವಲ್ಲದೆ, ರಾಜಕೀಯ ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿದ್ದರು. ದೇವರಾಜ ಅರಸು, ವೀರೇಂದ್ರ ಪಾಟೀಲ ಹಾಗೂ ಬಂಗಾರಪ್ಪ ಅವರ ಸಂಪುಟದಲ್ಲಿ ಸಚಿವರಾಗಿದ್ದರು ಎಂದು ನೆನಪು ಮಾಡಿಕೊಂಡರು.

ಪಾಟೀಲರು ಕಡಿಮೆ ಓದಿದ್ದರೂ ಅಪಾರವಾದ ಜನಪರ ಕಾಳಜಿಯನ್ನು ಹೊಂದಿದ್ದರು. ಬಡವರು, ದಲಿತರು, ಅಲ್ಪಸಂಖ್ಯಾತರಲ್ಲಿ ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಶಕ್ತಿ ತುಂಬಿದ್ದರು. ಅವರ ದಾರಿಯಲ್ಲಿ ಅವರ ಪುತ್ರ ಎಚ್.ಕೆ. ಪಾಟೀಲರು ನಡೆಯುತ್ತಿದ್ದಾರೆ ಎಂದರು.

ಸಾಧಕರಾದ ಯಲ್ಲಪ್ಪ ರೆಡ್ಡಿ, ಬಿ.ಎಸ್. ಪರಮಶಿವಯ್ಯ ಅವರಿಗೆ ಕೆ.ಎಚ್. ಪಾಟೀಲ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭೆಯ ಅಧ್ಯಕ್ಷ ಯು.ಟಿ. ಖಾದರ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನ ಸಭೆಯ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಸಚಿವರಾದ ಕೆ. ಎಚ್.ಮುನಿಯಪ್ಪ, ಎಚ್.ಕೆ.ಪಾಟೀಲ, ರಾಮಲಿಂಗಾರೆಡ್ಡಿ, ಎನ್.ಎಸ್ ಬೋಸರಾಜು, ಶರಣ ಪ್ರಕಾಶ್ ಪಾಟೀಲ, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಶಾಸಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.