ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಎಚ್ಐಆರ್ ಸಿಟಿ ಯೋಜನೆಗೆ 23 ರಂದು ಚಾಲನೆ– ಎಂ.ಬಿ. ಪಾಟೀಲ

Published : 3 ಆಗಸ್ಟ್ 2024, 14:51 IST
Last Updated : 3 ಆಗಸ್ಟ್ 2024, 14:51 IST
ಫಾಲೋ ಮಾಡಿ
Comments

ಬೆಂಗಳೂರು: ‘ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ, ಸುಮಾರು 2 ಸಾವಿರ ಎಕರೆಯಲ್ಲಿ ‘ನಾಲೆಡ್ಜ್, ಹೆಲ್ತ್ ಇನ್ನೋವೇಶನ್ ಮತ್ತು ರೀಸರ್ಚ್ ಸಿಟಿ’ (ಕೆಎಚ್ಐಆರ್ ಸಿಟಿ) ಯೋಜನೆ ಮೊದಲ ಹಂತಕ್ಕೆ ಇದೇ 23ರಂದು ಚಾಲನೆ ನೀಡಲಾಗುವುದು’ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

‘ಮೊದಲ ಹಂತದಲ್ಲಿ ಒಂದು ಸಾವಿರ ಎಕರೆ ಜಾಗದಲ್ಲಿ ಯೋಜನೆ ತಲೆ ಎತ್ತಲಿದೆ. ಎರಡು ಹಂತಗಳಲ್ಲಿ ₹40 ಸಾವಿರ ಕೋಟಿಗೂ ಹೆಚ್ಚು ಹೂಡಿಕೆ ಆಗಲಿದ್ದು, 50 ಸಾವಿರ ಉದ್ಯೋಗಗಳು ಸೃಷ್ಟಿ ಆಗಲಿವೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಅಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು, ಉದ್ಯಮ ವಲಯದ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

‘ಜಗತ್ತಿನ ವಿವಿಧೇಡೆ ವಿಶೇಷ ನಗರಗಳ ಪರಿಕಲ್ಪನೆ ಇದೆ. ಕೇಂದ್ರ ಸರ್ಕಾರವು ಇದೇ ಮಾದರಿ ಅನುಸರಿಸುತ್ತದೆ. ಉದ್ದೇಶಿತ ಕೆಎಚ್ಐಆರ್ ಸಿಟಿಯ 4 ವಲಯಗಳಲ್ಲಿ ಜಾಗತಿಕ ಮಟ್ಟದ ಅತ್ಯುನ್ನತ ಕಂಪನಿಗಳು ಬರಲಿವೆ. ಜಮೀನು, ವಿದ್ಯುತ್, ನೀರು, ರಸ್ತೆ ಮತ್ತಿತರ ಸೌಲಭ್ಯಗಳನ್ನು ರಾಜ್ಯ ಸರ್ಕಾರ ಒದಗಿಸಲಿದೆ. ಇದರಿಂದ ಆರ್ಥಿಕ ವರಮಾನ ಹೆಚ್ಚಳದ ಜೊತೆಗೆ ರಫ್ತು ವಹಿವಾಟು ಕೂಡ ವೃದ್ಧಿಸಲಿದೆ’ ಎಂದು ವಿವರಿಸಿದರು. 

‘ಜಾಗತಿಕವಾಗಿ ಉತ್ಕೃಷ್ಟ ಮಟ್ಟದ ಉದ್ದಿಮೆಗಳು, ವಿಶ್ವವಿದ್ಯಾಲಯಗಳು, ಮೆಡಿಕಲ್ ಟೂರಿಸಂ, ಸಂಶೋಧನೆ, ಚಿಕಿತ್ಸೆ, ನಾವೀನ್ಯತೆ ಇವುಗಳಿಗೆ ಉದ್ದೇಶಿತ ಸಿಟಿಯಲ್ಲಿ ಆದ್ಯತೆ ನೀಡಲಾಗುವುದು. ಜೊತೆಗೆ, ಭವಿಷ್ಯದ ಸಂಚಾರ ವ್ಯವಸ್ಥೆ, ಸೆಮಿಕಂಡಕ್ಟರ್, ಅಡ್ವಾನ್ಸ್ಡ್ ಮೆಟೀರಿಯಲ್ಸ್, ನವೋದ್ಯಮಗಳು, ವೈಮಾಂತರಿಕ್ಷ, ರಕ್ಷಣೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನ, ಜೀವವಿಜ್ಞಾನಗಳು ಮತ್ತು ಆಧುನಿಕ ತಂತ್ರಜ್ಞಾನ ವಲಯಗಳ ಕಂಪನಿಗಳೂ ಇಲ್ಲಿ ಬರಲಿವೆ’ ಎಂದೂ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT