ಬುಧವಾರ, ಜನವರಿ 22, 2020
28 °C

ಕಿ.ರಂ ಸಂಸ್ಕೃತಿ ಪ್ರಶಸ್ತಿಗೆ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಪ್ರೊ.ಕಿ.ರಂ.ನಾಗರಾಜ ಸಂಸ್ಕೃತಿ ಪ್ರಶಸ್ತಿಗೆ ಲೇಖಕಿ ಡಾ.ಎಚ್.ಎಸ್.ಶ್ರೀಮತಿ ಆಯ್ಕೆಯಾಗಿದ್ದಾರೆ. 

ಈ ಪ್ರಶಸ್ತಿಯು ₹ 10 ಸಾವಿರ ನಗದು ಬಹುಮಾನ ಹೊಂದಿದ್ದು, ಪ್ರೊ.ಕಿ.ರಂ.ನಾಗರಾಜ ಅವರ ಶಿಷ್ಯರು, ಒಡನಾಡಿಗಳು ಮತ್ತು ಅಭಿಮಾನಿಗಳು ಒಟ್ಟಾಗಿ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ. ಇದೇ 25ರಂದು ಸಂಜೆ 6ಕ್ಕೆ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರಜ್ಞಾ ಸಾಂಸ್ಕೃತಿಕ ವೇದಿಕೆ ಪ್ರಕಟಣೆಯಲ್ಲಿ ತಿಳಿಸಿದೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು