ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಐಎ: 14 ಸ್ಥಳಗಳಿಗೆ ವಿಮಾನಯಾನ ಸೇವೆ

Last Updated 18 ಆಗಸ್ಟ್ 2020, 21:28 IST
ಅಕ್ಷರ ಗಾತ್ರ

ಬೆಂಗಳೂರು: ವಿದೇಶಗಳಿಂದ ಸ್ವದೇಶಕ್ಕೆ ಮರಳಲು ಇಚ್ಛಿಸುವ ಪ್ರಯಾಣಿಕರಿಗೆ ಕೇಂದ್ರ ಸರ್ಕಾರದ ‘ವಂದೇ ಭಾರತ್ ಮಿಷನ್’ ಹಾಗೂ ‘ಏರ್ ಬಬಲ್’ ಕಾರ್ಯಕ್ರಮಗಳಡಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ 14 ಅಂತರರಾಷ್ಟ್ರೀಯ ಸ್ಥಳಗಳಿಗೆ ವಿಮಾನ ಸೇವೆ ಕಲ್ಪಿಸಲಾಗಿದೆ.

ಈ ಯೋಜನೆಯಡಿ 13 ಅಂತರರಾಷ್ಟ್ರೀಯ ವಿಮಾನಯಾನ ಸಂಸ್ಥೆಗಳು ಕಾರ್ಯಾಚರಣೆ ನಡೆಸಲಿವೆ. ಬೆಂಗಳೂರಿನಿಂದ ಅಬುದಾಬಿ, ದುಬೈ, ದೋಹಾ, ಫ್ರಾಂಕ್‍ಫರ್ಟ್, ಕುವೈತ್‌, ಲಂಡನ್, ಮಸ್ಕತ್, ಸಿಂಗಪುರಕ್ಕೆ ವಿಮಾನಗಳು ನೇರ ಹಾರಾಟ ನಡೆಸಲಿವೆ.

ಪ್ರಯಾಣಿಕರು ವಿಮಾನಗಳ ಆಗಮನ ಮತ್ತು ನಿರ್ಗಮನದ ಮಾಹಿತಿಗಳನ್ನು https://www.bengaluruairport.com/travellers/passenger-services/faqs-at-blr.html ನಿಂದ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT