ಬುಧವಾರ, ಸೆಪ್ಟೆಂಬರ್ 30, 2020
21 °C

ಕೆಐಎ: 100 ದಿನದಲ್ಲಿ 14 ಲಕ್ಷ ಮಂದಿ ಪ್ರಯಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ ಲಾಕ್‌ಡೌನ್‌ ತೆರವಿನ ಬಳಿಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೇಶಿ ವಿಮಾನಗಳ ಹಾರಾಟ ಪುನರಾರಂಭಗೊಂಡು 100 ದಿನಗಳು ಕಳೆದಿದ್ದು, ಈ ಅವಧಿಯಲ್ಲಿ 14 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸಿದ್ದಾರೆ.

ಮೇ 25ರಿಂದ ವಿಮಾನಗಳ ಸಂಚಾರಕ್ಕೆ ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶಕರು (ಡಿಜಿಸಿಎ) ಅನುಮತಿ ನೀಡಿದ್ದರು. ಸೆ.1ಕ್ಕೆ ನೂರು ದಿನಗಳ ಕಾರ್ಯಾಚರಣೆ ಪೂರ್ಣಗೊಳಿಸಿದೆ. ಈ ಅವಧಿಯಲ್ಲಿ ಒಟ್ಟು 15,658 ವಿಮಾನಗಳು ಸಂಚಾರ ಮಾಡಿವೆ.

ಮೇ 25ರಂದು ಮೊದಲ ವಿಮಾನ ಬೆಂಗಳೂರಿನಿಂದ ರಾಂಚಿಗೆ ನಿರ್ಗಮಿಸಿತು ಹಾಗೂ ಚೆನ್ನೈನಿಂದ ಬೆಂಗಳೂರಿಗೆ ಮೊದಲ ವಿಮಾನ ಬಂತು. ಕೋಲ್ಕತ್ತಗೆ ಅತಿ ಹೆಚ್ಚು ಮಂದಿ ಪ್ರಯಾಣಿಸಿದ್ದು, ನಂತರದ ಸ್ಥಾನಗಳಲ್ಲಿ ದೆಹಲಿ ಮತ್ತು ಪಟನಾ ಇವೆ ಎಂದು ಪ್ರಕಟಣೆ ತಿಳಿಸಿದೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು