‘ಅಜಿತಾಬ್‌ ನಾಪತ್ತೆ ಪ್ರಕರಣ: ಸಿಬಿಐಗೆ ವಹಿಸಿ’

7

‘ಅಜಿತಾಬ್‌ ನಾಪತ್ತೆ ಪ್ರಕರಣ: ಸಿಬಿಐಗೆ ವಹಿಸಿ’

Published:
Updated:

ಬೆಂಗಳೂರು:‌‘ಸಾಫ್ಟ್‌ವೇರ್ ಎಂಜಿನಿಯರ್ ಕುಮಾರ್‌ ಅಜಿತಾಬ್‌ ನಾಪತ್ತೆ ಆಗಿ ಹಲವು ತಿಂಗಳಾಗಿದ್ದು, ಪೊಲೀಸರು ಇದುವರೆಗೂ ಪತ್ತೆ ಹಚ್ಚಿಲ್ಲ. ಈ ಪ್ರಕರಣವನ್ನುರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು’ ಎಂದು ತಂದೆ ಅಶೋಕ್‌ ಕುಮಾರ್‌ ಸಿನ್ಹಾ ಆಗ್ರಹಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘2017ರ ಡಿಸೆಂಬರ್ 18ರ ಸಂಜೆ 6.30ಕ್ಕೆ ಕುಮಾರ ಅಜಿತಾಬ್‌ ನಾಪತ್ತೆಯಾಗಿದ್ದರು. ಆ ಬಗ್ಗೆ ವೈಟ್‌ಫೀಲ್ಡ್ ಠಾಣೆಗೆ ದೂರು ನೀಡಿದ್ದೆವು. ಪೊಲೀಸರು ಮಗನನ್ನು ಪತ್ತೆ ಹಚ್ಚುವಲ್ಲಿ ವಿಫಲರಾಗಿದ್ದಾರೆ. ವಿಶೇಷ ತನಿಖಾ ತಂಡ ರಚಿಸಿದರೂ ತನಿಖೆಯಲ್ಲಿ ಪ್ರಗತಿ ಕಂಡುಬಂದಿಲ್ಲ’ ಎಂದು ದೂರಿದರು. 

‘ಬ್ರಿಟಿಷ್ ಟೆಲಿಕಾಂ ಕಂಪೆನಿಯಲ್ಲಿ ನನ್ನ ಮಗ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ. ಆತ ನಾಪತ್ತೆಯಾದಾಗಿನಿಂದ ಕುಟುಂಬವು ಕಣ್ಣೀರಿನಲ್ಲಿ ಕೈ ತೊಳೆಯುತ್ತಿದೆ’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !