ಮಂಗಳವಾರ, ಜನವರಿ 21, 2020
25 °C

ಅಶ್ಲೀಲ ಚಿತ್ರಕ್ಕೆ ಮಕ್ಕಳ ಬಳಕೆ: ಎಫ್‌ಐಆರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯದಲ್ಲಿ 113 ಮಕ್ಕಳನ್ನು ಅಶ್ಲೀಲ ಚಿತ್ರಗಳಿಗೆ ಬಳಸಲಾಗಿದೆ ಎಂದು ಆರೋಪಿಸಲಾದ ಪ್ರಕರಣಗಳಿಗೆ ಸಂಬಂಧಿಸಿ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಏಳು ಎಫ್‌ಐಆರ್ ದಾಖಲಿಸಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಸರ್ಕಾರಿ ವಕೀಲರು ನ್ಯಾಯಪೀಠಕ್ಕೆ ಪ್ರಮಾಣಪತ್ರ ಹಾಗೂ ಏಳು ಎಫ್‌ಐಆರ್ ಪ್ರತಿಗಳನ್ನು ಒದಗಿಸಿದರು.

‘ತಪ್ಪಿತಸ್ಥರ ವಿರುದ್ಧ ತನಿಖೆ ಅಗತ್ಯವಿದೆ’ ಎಂದ ನ್ಯಾಯಪೀಠ, ‘ಮುಂದಿನ ವಿಚಾರಣೆ ವೇಳೆಗೆ, ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಮಾಣಪತ್ರ ಸಲ್ಲಿಸಿ’ ಎಂದು ಸೂಚಿಸಿತು. ವಿಚಾರಣೆಯನ್ನು ಇದೇ 21ಕ್ಕೆ ಮುಂದೂಡಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು