ಸಂಸ್ಥೆಯ ಆಡಳಿತ ಸುಧಾರಣೆ ಹಾಗೂ ಕಾರ್ಯಚಟುವಟಿಕೆಗಳ ನಿರ್ವಹಣೆಗೆ ಐಎಎಸ್ ಅಧಿಕಾರಿ ಎನ್. ಮಂಜುಶ್ರೀ ಅವರನ್ನು ಆಡಳಿತಾಧಿಕಾರಿಯನ್ನಾಗಿ ಫೆಬ್ರುವರಿಯಲ್ಲಿ ನೇಮಕ ಮಾಡಲಾಗಿತ್ತು. ಆರು ತಿಂಗಳ ಅವಧಿ ಮುಕ್ತಾಯವಾಗಿದ್ದರಿಂದ ವೈದ್ಯಕೀಯ ಶಿಕ್ಷಣ ಇಲಾಖೆಯು ಆಡಳಿತಾಧಿಕಾರಿಯ ಕಾರ್ಯಾವಧಿ ವಿಸ್ತರಿಸುವಂತೆ ಸರ್ಕಾರವನ್ನು ಕೋರಿತ್ತು. ಅದರಂತೆ ಎನ್. ಮಂಜುಶ್ರೀ ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ನವೀನ್ ಭಟ್ ಅವರನ್ನು ನೇಮಿಸಲಾಗಿದೆ.