ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ತನ್ನ ಘನತ್ಯಾಜ್ಯ ನಿರ್ವಹಣಾ ಘಟಕದ ‘ಪರಿಸರ ನಿರ್ವಹಣಾ ವ್ಯವಸ್ಥೆ’ಗೆ ಜಿನೀವಾದ ಅಂತರರಾಷ್ಟ್ರೀಯ ಪ್ರಮಾಣೀಕರಣ ಸಂಸ್ಥೆಯಿಂದ (ಇಎಂಎಸ್) ಪರಿಸರ ಮಾನದಂಡಗಳ ಪ್ರಮಾಣಪತ್ರ ಪಡೆದಿದೆ.

ಸಂಸ್ಥೆಯ ಆವರಣದಲ್ಲಿ 4 ಸಾವಿರ ಚದರ ಅಡಿ ಪ್ರದೇಶದಲ್ಲಿ ಈ ಘಟಕ ನಿರ್ಮಿಸಲಾಗಿದೆ. ಪ್ರತಿನಿತ್ಯ ಒಂದು ಟನ್ ಜೈವಿಕ ಅನಿಲ (ಬಯೋಗ್ಯಾಸ್) ಉತ್ಪಾದನೆಯ ಸಾಮರ್ಥ್ಯವನ್ನು ಈ ಘಟಕ ಹೊಂದಿದೆ. ಸಾವಯವ ಮತ್ತು ತೋಟದ ತ್ಯಾಜ್ಯದಿಂದ ಜೈವಿಕ ಗೊಬ್ಬರ ತಯಾರಿಸಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

‘ಈ ಘಟಕದಿಂದ ಉತ್ಪಾದನೆಯಾಗುವ ಜೈವಿಕ ಅನಿಲವು ವಿದ್ಯುತ್ ಚಾಲಿತ ವಾಹನಗಳಿಗೂ ಸಹಕಾರಿಯಾಗಿದೆ. ಜೈವಿಕ ಅನಿಲ ಉತ್ಪಾದನೆ ಬಳಿಕ, ತ್ಯಾಜ್ಯವನ್ನು ಗೊಬ್ಬರವಾಗಿ ಮಾರ್ಪಡಿಸಲಾಗುತ್ತಿದೆ. ಸಂಸ್ಥೆಯ ಆವರಣದಲ್ಲಿರುವ ಸಾವಿರಾರು ಮರಗಳಿಗೆ ಆ ಗೊಬ್ಬರವನ್ನು ಬಳಸಲಾಗುತ್ತಿದೆ. ಒಣ ತ್ಯಾಜ್ಯದ ವೈಜ್ಞಾನಿಕ ನಿರ್ವಹಣೆಗೆ 500 ಚದರ ಅಡಿ ಸ್ಥಳಾವಕಾಶದಲ್ಲಿ ಒಣ ತ್ಯಾಜ್ಯ ವಿಂಗಡಣಾ ಘಟಕವನ್ನೂ ಸ್ಥಾಪಿಸಲಾಗಿದೆ’ ಎಂದು ಸಂಸ್ಥೆಯ ನಿರ್ದೇಶಕ ಡಾ.ಟಿ.ನವೀನ್ ಹೇಳಿದ್ದಾರೆ.

‘2021ರ ನವೆಂಬರ್ನಿಂದ 2025ರ ನವೆಂಬರ್ವರೆಗೆ ಈ ತ್ಯಾಜ್ಯ ನಿರ್ವಹಣಾ ಘಟಕದ ನೆರವಿನಿಂದ 10.89 ಲಕ್ಷ ಕೆ.ಜಿ ಆಹಾರ ತ್ಯಾಜ್ಯ, 2.80 ಲಕ್ಷ ಕೆ.ಜಿ ಉದ್ಯಾನದ ತ್ಯಾಜ್ಯ ಹಾಗೂ 3.73 ಲಕ್ಷ ಒಣ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲಾಗಿದೆ. ಸಂಸ್ಥೆಯು ಕ್ಯಾನ್ಸರ್ ರೋಗಿಗಳ ಆರೈಕೆಯ ಜತೆಗೆ, ಪರಿಸರ ಸ್ನೇಹಿ ವಾತಾವರಣ ನಿರ್ಮಾಣಕ್ಕೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.